ಚುನಾವಣಾ ಸಮಯದಲ್ಲಿ ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್ ನೀಡಲು ಮುಂದಾದ ಸಿಎಂ

04 Jan 2018 11:31 AM | Politics
382 Report

ಚುನಾವಣಾ ಸಮಯದಲ್ಲಿ ರಾಜ್ಯದಲ್ಲಿರೋ 5 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಓಟ್ ಬ್ಯಾಂಕ್ ಸೆಳೆಯೋ ಸಲುವಾಗಿ ನಿವೃತ್ತಿ ವಯಸ್ಸನ್ನು ರಾಜ್ಯ ಸರ್ಕಾರ 2 ವರ್ಷ ಹೆಚ್ಚಿಸಲು ಮುಂದಾಗಿದೆ. ಈಗಿರುವ 60 ರ ಬದಲಾಗಿ ಇನ್ನೆರಡು ವರ್ಷ ಹೆಚ್ಚಿಸಲು ತೀರ್ಮಾನ ಮಾಡಲಾಗಿದೆ. ಅಂದ್ರೆ ಇನ್ನು ಮುಂದೆ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 62 ಆಗಲಿದೆ.

ಚುನಾವಣಾ ಸಮಯದಲ್ಲೇ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದೆ. ಈ ಗಿಫ್ಟ್ ಮೂಲಕ ರಾಜ್ಯದಲ್ಲಿರೋ ಸರ್ಕಾರಿ ನೌಕರರ ಜೊತೆ ಅವರ ಕುಟುಂಬದವರ ಮತವನ್ನು ಸೆಳೆಯಲು ಮಾಸ್ಟರ್ ಪ್ಲಾನ್ ಮಾಡಿದೆ. ಇನ್ನೇನು ಕೆಲವೇ ದಿನಗಳಲ್ಲಿ ನಿವೃತ್ತರಾಗಲಿರೋ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದೆ. ಈ ಬಗ್ಗೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿರೋ ಸಿಎಂ, ಮುಂಬರುವ ಬಜೆಟ್‍ನಲ್ಲಿ ಈ ಬಗ್ಗೆ ಘೋಷಣೆ ಮಾಡುತ್ತೇವೆ ಅಂತ ಅಧ್ಯಕ್ಷರಿಗೆ ಭರವಸೆ ನೀಡಿದ್ದಾರಂತೆ. ಅಷ್ಟೇ ಅಲ್ಲದೆ ರಾಜ್ಯ ಸರ್ಕಾರಿ ನೌಕರರ ಸಂಘದ ಇತರೆ ಬೇಡಿಕೆಗಳಿಗಳಿಗೂ ಅಸ್ತು ಅಂದಿರೋ ಸಿದ್ದರಾಮಯ್ಯ, ಜನವರಿ 18 ರಂದು ಕೈಗೊಂಡಿದ್ದ ಮುಷ್ಕರವನ್ನು ಕೈಬಿಡಬೇಕು ಅಂತ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Edited By

Suresh M

Reported By

Madhu shree

Comments