ಕರ್ನಾಟಕ ಚುನಾವಣಾ ಕುರುಕ್ಷೇತ್ರಕ್ಕೆ ಜೆಡಿಎಸ್ ರಣತಂತ್ರ

05 Jan 2018 10:41 AM | Politics
4541 Report

ಬೆಂಗಳೂರು ಗ್ರಾ ಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬರುವ ವಿಧಾನಸಭೆ ಕ್ಷೇತ್ರಗಳಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಕುಟುಂಬದವರು ಮತ್ತು ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಅವರು ಸ್ಪರ್ಧಿಸುತ್ತಿರುವ ಕ್ಷೇತ್ರಗಳು ದಿನೇ ದಿನೇ ಕಾವೇರುತ್ತಿವೆ. ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಅವರ ಕುಟುಂಬದ ಮತ್ತೊಂದು ಕುಡಿ ಹೆಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ರಾಜಕೀಯ ಕಣಕ್ಕಿಳಿದು ಡಿಕೆಶಿ ಸೋದರರ ವಿರುದ್ಧ ಸ್ಪರ್ಧಿಸಲಿದ್ದಾರೆ.

ಅನಿತಾ ಮತ್ತು ಪ್ರಜ್ವಲ್ ಸ್ಪರ್ಧೆಗೆ ಸಿದ್ಧ: ನಿರ್ಮಾಪಕ ಶಾಸಕ ಮುನಿರತ್ನ ಅವರ ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಚಿತ್ರ ಕುರುಕ್ಷೇತ್ರ ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಿಗೆ ತೆರೆಗೆ ಬರುವ ನಿರೀಕ್ಷೆಯಿದ್ದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣರನ್ನು ಚುನಾವಣಾ ಕಣಕ್ಕಿಳಿಸಿದರೆ ಚುನಾವಣಾ ಕಾವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಮುನಿರತ್ನ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಮೂಲಕ ಸ್ಪರ್ಧಿಸಿದರೆ ಯಾವುದೇ ಆಶ್ಚರ್ಯವಿಲ್ಲ. ರಾಮನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕುಮಾರಸ್ವಾಮಿಯವರಿಗೆ ಈ ಬಾರಿ ಹಾದಿ ಸುಗಮವಾಗಿದೆ ಎನ್ನಬಹುದು. ಏಕೆಂದರೆ ಕಾಂಗ್ರೆಸ್ ಮತ್ತು ಬಿಜೆಪಿ ಇಲ್ಲಿ ಸ್ಪರ್ಧೆಗಿಳಿಯಲು ಇನ್ನೂ ಪ್ರಬಲ ಅಭ್ಯರ್ಥಿಗಳನ್ನು ಹುಡುಕುತಿದ್ದಾರೆ. ಇದೇ ರೀತಿ ಪಿ.ಜಿ.ಆರ್.ಸಿಂಧ್ಯಾ ಅವರಿಂದ ಕಸಿದುಕೊಂಡ ಕನಕಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಡಿ.ಕೆ.ಶಿವಕುಮಾರ್ ಎದುರು ಕೂಡ ಜೆಡಿಎಸ್ ಮತ್ತು ಬಿಜೆಪಿಯ ಪ್ರಬಲ ಸ್ಪರ್ಧಿಗಳಿಲ್ಲ. ತಮ್ಮ ಪುತ್ರ ಹೆಚ್.ಡಿ.ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಿಯೇ ತೀರಬೇಕೆಂದು ಪಣತೊಟ್ಟಿರುವ ದೇವೇಗೌಡರು, ಸಿ.ಪಿ.ಯೋಗೇಶ್ವರ್ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಕ್ಕಲಿಗ ಮತಗಳನ್ನು ತಮ್ಮತ್ತ ಸೆಳೆಯಲು ಪ್ರಯತ್ನಿಸುತ್ತಿರುವ ಬಿಜೆಪಿಯಿಂದಾಗಿ ಈ ಬಾರಿಯ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಖಂಡಿತಾ ಕುತೂಹಲ ಮೂಡಿಸುವುದರಲ್ಲಿ ಸಂಶಯವಿಲ್ಲ.

Edited By

Shruthi G

Reported By

Madhu shree

Comments