ಸಿ.ಪಿ.ಯೋಗೇಶ್ವರ್‍ಗೆ ಸೆಡ್ಡು ಹೊಡೆಯಲು ಜೆಡಿಎಸ್ ಸಜ್ಜು

09 Jan 2018 9:39 AM | Politics
9487 Report

ಗೊಂಬೆಗಳ ನಾಡು ಚನ್ನಪಟ್ಟಣ ರಾಜಕೀಯ ವಿಶೇಷ ಚರ್ಚೆಗೆ ಗ್ರಾಸವಾಗಿದೆ. ಸಿ.ಪಿ.ಯೋಗೇಶ್ವರ್‍ಗೆ ತೀವ್ರ ಪ್ರತಿಸ್ಪರ್ಧೆ ಒಡ್ಡುತ್ತಾ ಬಂದಿರುವುದು ಜೆಡಿಎಸ್ ಮಾತ್ರ.

ಈ ಬಾರಿ ಜೆಡಿಎಸ್‍ನಲ್ಲಿ ಅಭ್ಯರ್ಥಿ ಯಾರೆಂಬುದು ಇನ್ನು ಕೂಡ ನಿರ್ಧಾರವಾಗಿಲ್ಲ. ಮಾಜಿ ಶಾಸಕ ಎಂ.ಸಿ.ಅಶ್ವಥ್, ಚನ್ನಪಟ್ಟಣ ತಾಲೂಕು ಜೆಡಿಎಸ್ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಜಯಮುತ್ತು, ಕೇಂಬ್ರಿಡ್ಜ್ ಶಾಲೆಯ ಮಾಲೀಕ ಲಿಂಗೇಶ್‍ಕುಮಾರ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಇದಲ್ಲದೆ, ಚನ್ನಪಟ್ಟಣದಲ್ಲಿ ಸ್ಪರ್ಧಿಸಿ ಸೋತಿದ್ದ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಮತ್ತೆ ಸ್ಪರ್ಧೆಗಿಳಿಸಬೇಕೆಂದು ಸ್ಥಳೀಯ ಜೆಡಿಎಸ್ ಮುಖಂಡರಿಂದ ಒತ್ತಡವಿದೆ.

ಜೆಡಿಎಸ್ ವರಿಷ್ಠರ ಮೇಲೆ ಒತ್ತಡ ಹಾಕುತ್ತಿರುವ ಸ್ಥಳೀಯ ಮುಖಂಡರು ಅನಿತಾ ಕುಮಾರಸ್ವಾಮಿ ಅವರನ್ನೇ ಕಣಕ್ಕಿಳಿಸುವಂತೆ ಒತ್ತಾಯಿಸುತ್ತಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸ್ಥಳೀಯರಲ್ಲೇ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಿ. ಅನಿತಾಕುಮಾರಸ್ವಾಮಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೊನೆ ಗಳಿಗೆಯಲ್ಲಿ ಯಾರನ್ನು ಕಣಕ್ಕಿಳಿಸುತ್ತಾರೆ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ. ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ಚನ್ನಪಟ್ಟಣ ರಾಜಕೀಯ ರಂಗೇರತೊಡಗಿದೆ.

Edited By

Shruthi G

Reported By

Shruthi G

Comments