ಸಿಪಿ ಯೋಗೇಶ್ವರ್ ಚುನಾವಣಾ ರಾಜಕೀಯಕ್ಕೆ ಅಂತ್ಯ ಹಾಡಲು ಅನಿತಾ ಕುಮಾರಸ್ವಾಮಿ

10 Jan 2018 9:26 AM | Politics
7212 Report

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಅವರ ಚುನಾವಣಾ ರಾಜಕೀಯಕ್ಕೆ ಅಂತ್ಯ ಹಾಡಲು ಜೆಡಿಎಸ್ ಹಾಗೂ ಕಾಂಗ್ರೆಸ್ ಪಣತೊಟ್ಟಂತೆ ಕಾಣುತ್ತಿದೆ. ಪ್ರಬಲ ಒಕ್ಕಲಿಗ ನಾಯಕ, ಹಾಲಿ ಶಾಸಕ ಯೋಗೇಶ್ವರ್ ಅವರನ್ನು ಮಣಿಸಲು ಜೆಡಿಎಸ್ ನಿಂದ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವುದು ಬಹುತೇಕ ಖಚಿತವಾಗಿದೆ.

ಚನ್ನಪಟ್ಟಣದಲ್ಲಿ ಜೆಡಿಎಸ್ ನಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಪ್ರಶ್ನೆಗೆ ಶೀಘ್ರವೇ ಉತ್ತರ ಸಿಗಲಿದ್ದು, ಕಳೆದ ಎರಡು ದಿನಗಳಿಂದ ಕುಮಾರಸ್ವಾಮಿ ಅವರ ಮನೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ ಎಂದು ಜೆಡಿಎಸ್ ಮೂಲಗಳು ಹೇಳಿವೆ. ಈ ಬಾರಿ ಪರಿಸ್ಥಿತಿ ಬದಲಾಗಿದೆ. 2013ರ ಸೋಲಿನ ಸೇಡನ್ನು ಜೆಡಿಎಸ್ ತೀರಿಸಿಕೊಳ್ಳಲು ಮುಂದಾಗಿದ್ದು, ಇದಕ್ಕೆ ಸಂಪೂರ್ಣ ಸಹಕಾರ ನೀಡಲು ಇಂಧನ ಸಚಿವ ಡಿ.ಕೆ ಶಿವಕುಮಾರ್ ಸಜ್ಜಾಗಿದ್ದಾರೆ. ಶತಾಯ-ಗತಾಯ ಯೋಗೇಶ್ವರ್ ಸೋಲು ಕಾಣಲು ಹವಣಿಸುತ್ತಿದ್ದಾರೆ.ಚನ್ನಪಟ್ಟಣದಲ್ಲಿ ಕಣಕ್ಕಿಳಿಸಲು ಬೇರೆ ಯಾರನ್ನಾದರೂ ಗುರುತಿಸಿ ಎಂದು ಸ್ಥಳೀಯ ಮುಖಂಡರಿಗೆ ತಿಳಿಸಲಾಗಿದೆ,' ಎನ್ನುವ ಮೂಲಕ ಅನಿತಾ ಕುಮಾರಸ್ವಾಮಿಯವರನ್ನು ಚನ್ನಪಟ್ಟಣದಿಂದ ಕಣಕ್ಕಿಳಿಸುವುದಿಲ್ಲ ಎಂದು ದೇವೇಗೌಡರು ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಆದರೆ, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಅನಿತಾ ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣದಿಂದ ಹಾಗೂ ಪ್ರಜ್ವಲ್ ರೇವಣ್ಣ ಅವರಿಗೆ ಬೇಲೂರಿನಿಂದ ಸ್ಪರ್ಧಿಸಲು ಟಿಕೆಟ್ ನೀಡುವ ಸಾಧ್ಯತೆ ನಿಚ್ಚಳವಾಗಿದೆ.

Edited By

Shruthi G

Reported By

Shruthi G

Comments