ಸಿಎಂ ಆಪ್ತ ಕುಮಾರಸ್ವಾಮಿ-ದೇವೇಗೌಡರನ್ನ ಭೇಟಿ ಮಾಡಿದ್ದೇಕೆ..?

16 Jan 2018 9:26 AM | Politics
315 Report

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ ವಲಯದಲ್ಲೊಬ್ಬರಾದ ಕೇಂದ್ರದ ಮಾಜಿ ಸಚಿವ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸುವ ಮೂಲಕ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದಾರೆ. ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಜೆಡಿಎಸ್ ಇಬ್ಬರೂ ನಾಯಕರನ್ನು ಭೇಟಿ ಮಾಡಿದ ಇಬ್ರಾಹಿಂ, ಸುಮಾರು ಮುಕ್ಕಾಲು ಗಂಟೆ ಕಾಲ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರ ಕಾರ್ಯವೈಕರಿ ಮತ್ತು ಕಾಂಗ್ರೆಸ್​ ನ ನಾಯಕರ ನಡವಳಿಕೆಯಿಂದ ಬೇಸತ್ತಿರುವ ಸಿಎಂ ಇಬ್ರಾಹಿಂ ಕಾಂಗ್ರೆಸ್​ನಲ್ಲಿದ್ದರೂ ಮುಖ್ಯ ಭೂಮಿಕೆಗೆ ಬಂದಿರಲಿಲ್ಲ. ಆದರೆ ಮೊನ್ನೆ ನಡೆದ ಎಂಎಲ್​ಸಿ ಚುನಾವಣೆಯಲ್ಲಿ ಟಿಕೆಟ್​ ಪಡೆಯುವಲ್ಲಿ ಯಶಸ್ವಿಯಾಗಿದ್ದರೂ ಕೂಡ ಅವರ ಮನಸ್ಸಿನಲ್ಲಿದ್ದ ಅಸಮಧಾನ ಮಾತ್ರ ಕಡಿಮೆಯಾಗಿಲ್ಲ ಎನ್ನಲಾಗುತ್ತಿದೆ.ಸಿಎಂ ಸಿದ್ದರಾಮಯ್ಯನವರ ಕಾರ್ಯವೈಕರಿ ಮತ್ತು ಕಾಂಗ್ರೆಸ್​ ನ ನಾಯಕರ ನಡವಳಿಕೆಯಿಂದ ಬೇಸತ್ತಿರುವ ಸಿಎಂ ಇಬ್ರಾಹಿಂ ಕಾಂಗ್ರೆಸ್​ನಲ್ಲಿದ್ದರೂ ಮುಖ್ಯ ಭೂಮಿಕೆಗೆ ಬಂದಿರಲಿಲ್ಲ. ಆದರೆ ಮೊನ್ನೆ ನಡೆದ ಎಂಎಲ್​ಸಿ ಚುನಾವಣೆಯಲ್ಲಿ ಟಿಕೆಟ್​ ಪಡೆಯುವಲ್ಲಿ ಯಶಸ್ವಿಯಾಗಿದ್ದರೂ ಕೂಡ ಅವರ ಮನಸ್ಸಿನಲ್ಲಿದ್ದ ಅಸಮಧಾನ ಮಾತ್ರ ಕಡಿಮೆಯಾಗಿಲ್ಲ ಎನ್ನಲಾಗುತ್ತಿದೆ.

ದೇವೇಗೌಡರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ, ಜೆಡಿಎಸ್ ಸೇರ್ಪಡೆ ಬಗ್ಗೆ ಚರ್ಚಿಸಿಲ್ಲ. ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಚಾರ ಕಾಂಗ್ರೆಸ್ ಪಕ್ಷದ ಹೈಕಮಾಂಡ್‍ಗೆ ಬಿಟ್ಟಿದ್ದು. ಮೈತ್ರಿ ಕುರಿತಂತೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ, ಸಲಹೆ ಮಾತ್ರ ನೀಡಬಹುದಷ್ಟೆ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಕೆಲವರು ಕೆಟ್ಟ ವಾತಾವರಣ ಸೃಷ್ಟಿಸಲು ಪ್ರಯತ್ನ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂಬುದು ದೇವೇಗೌಡರ ಅಭಿಪ್ರಾಯವೂ ಆಗಿದೆ ಎಂದರು. ಮಕರ ಸಂಕ್ರಾಂತಿ ಹಬ್ಬವಾದ್ದರಿಂದ ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ಶುಭಾಶಯ ಕೋರಲು ಬಂದಿದ್ದೆ.ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿ ಶುಭ ಕೋರಿ ಸಂತೋಷದಿಂದ ಹೊರಡುತ್ತಿದ್ದೇನೆ ಎಂದು ಮಾರ್ಮಿಕವಾಗಿ ನುಡಿದರು.

Edited By

Shruthi G

Reported By

Shruthi G

Comments