ಆರ್.ಎಂ.ಮಂಜುನಾಥಗೌಡ ಜೆಡಿಎಸ್ ಸೇರಲು ಡೇಟ್ ಫಿಕ್ಸ್

ಶಿವಮೊಗ್ಗ ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಇದೇ 23ರಂದು ಜೆಡಿಎಸ್ ಸೇರಲಿದ್ದಾರೆ. ಇಲ್ಲಿನ ಪದ್ಮನಾಭನಗರದಲ್ಲಿರುವ ಎಚ್.ಡಿ.ದೇವೇಗೌಡರ ನಿವಾಸದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
2013ರ ವಿಧಾನಸಭೆ ಚುನಾವಣೆಯಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಕೆಜೆಪಿ ಅಭ್ಯರ್ಥಿಯಾಗಿ ತೀರ್ಥಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಂಜುನಾಥಗೌಡ, ಬಳಿಕ ಬಿಜೆಪಿ ಜತೆಗೆ ಗುರುತಿಸಿಕೊಂಡಿದ್ದರು. ಅದಾದ ನಂತರ ಕಾಂಗ್ರೆಸ್ ಸೇರಿದ್ದರು. ಚುನಾವಣೆ ಹತ್ತಿರವಾಗುತ್ತಿದ್ದಂತೆ ಜೆಡಿಎಸ್ ಸೇರಲು ಮುಂದಾಗಿದ್ದಾರೆ.2018ರ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ನೀಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
Comments