ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿಗೆ ಕಾದಿದೆ ಬಿಗ್ ಶಾಕ್...!!

04 Feb 2018 1:02 PM | Politics
5488 Report

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿವಸಗಳು ಬಾಕಿ ಇರುವಂತೆ ಕೆಲ ಪಕ್ಷಗಳು ತಮ್ಮ ಅಸ್ತ್ವಿತವನ್ನು ಉಳಿಸಿಕೊಂಡು ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಮುಂದಾಗಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ಕೂಡ ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಷ್ಟ್ರೀಯ ಪಕ್ಷವಾದ ಬಿಎಸ್ಪಿ ಜೊತೆಗೆ ಜೋಡಿಸಿಲು ಮುಂದಾಗಿದೆ ಅಂತ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ.

ಹೌದು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಪ್ರಾದೇಶಿಕ ಪಕ್ಷಗಳ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಿದರೆ ಪ್ರಾದೇಶಿಕ ಪಕ್ಷಗಳು ಸುಲಭವಾಗಿ ಅಧಿಕಾರವನ್ನು ಹಿಡಿಯಬಹುದಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದ ಹಿತ ಕಾಯದ ರಾಷ್ಟ್ಟೀಯ ಪಕ್ಷಗಳನ್ನು ಸುಲಭವಾಗಿ ಮಣಿಸಬಹುದಾಗಿದೆ ಎಂದು ಸಂಸದ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.ಅವರು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದ ಕೆ.ಬೆಟ್ಟಹಳ್ಳಿ ಗ್ರಾಪಂ ಹಾಗೂ ಲಕ್ಷ್ಮೀಸಾಗರ ಜಿಪಂ ವ್ಯಾಪ್ತಿಯ ಜೆಡಿಎಸ್ ಕಾರ‍್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಇದೇ ವೇಳೆ ಅವರು ಮಾತನಾಡುತ್ತ ಚುನಾವಣಾ ಮೈತ್ರಿ ವಿಷಯವಾಗಿ ರಾಜ್ಯದಲ್ಲಿ ಈಗಾಗಲೆ ಕುಮಾರಸ್ವಾಮಿ ಮುಖ್ಯಮಂತ್ರಿ ಮಾಡಬೇಕೆಂಬ ಪರ್ವ ಶುರುವಾಗಿದೆ. ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರೋದು ನಿಶ್ಚಿತ. ಸೂರ್ಯ ಹೇಗೆ ಪೂರ್ವದಲ್ಲಿ ಹುಟ್ಟುವುದು ಎಷ್ಟು ಸತ್ಯವೋ ಮುಂದೆ ರಾಜ್ಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗೋದು ಕೂಡ ಅಷ್ಟೇ ಸತ್ಯ ಎಂದರು.ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ರಾಷ್ಟ್ರೀಯ ಪಕ್ಷಗಳು ಸ್ಥಳೀಯ ಜನರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸಂಪೂರ್ಣವಾಗಿ ವಿಫಲವಾಗುತ್ತೀವೆ. ಇದಕ್ಕೆ ಪರಿಹಾರ ಎಲ್ಲಾ ಪ್ರಾದೇಶಿಕ ಪಕ್ಷಗಳು ಸೇರಿಕೊಂಡು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರುವುದಾಗಿದೆ.ಈ ನಿಟ್ಟಿನಲ್ಲಿ ಈ ಬಾರಿ ಚುನಾವಣೆಯಲ್ಲಿ ಕೂಡ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದರ ಬಗ್ಗೆ ಪಕ್ಷದ ಹಿರಿಯ ನಾಯಕರುಗಳು ಚರ್ಚೆ ನಡೆಸುವ ಸಾಧ್ಯತೆ ಇದೆ ಅಂತ ಅವರು ಹೇಳಿದ್ದಾರೆ.

 

Edited By

Shruthi G

Reported By

Shruthi G

Comments