ಪ್ರಧಾನಿ ಮೋದಿ ವಿರುದ್ಧ ರಮ್ಯಾ ಟ್ವೀಟ್ ಗೆ ಟಾಂಗ್ ಕೊಟ್ಟ ನಟ ಜಗ್ಗೇಶ್

05 Feb 2018 10:06 AM | Politics
337 Report

ಟ್ವಿಟರ್ ನಲ್ಲಿ ನಟಿ ರಮ್ಯಾ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ನಟ ಜಗ್ಗೇಶ್, ರಮ್ಯಾರನ್ನು 'ಕನ್ನಡ ಬಾರದ ಕಾಡುಪಾಪ' ಎಂದು ವ್ಯಂಗ್ಯ ಮಾಡಿದ್ದಾರೆ. "ದೊಡ್ಡವರ ಬಗ್ಗೆ ಮಾತಾಡ ಬೇಕಾದರೆ ಮಾತಾಡುವ ಮಂದಿಗೆ ವಯಸ್ಸು ಅನುಭವ ಸಾಧನೆ ಮಾಡಿ ಪಕ್ವವಾದಾಗ ಅಪಭ್ರಂಷ ಇಲ್ಲದೆ ಚರ್ಚೆ ಮಾಡಿದರೆ ಅದನ್ನ ತರ್ಕ ಎಂದು ಒಪ್ಪಿ ವಿಮರ್ಶೆ ಮಾಡಿ ನಿರ್ಣಯಸುತ್ತಾರೆ ಜನ ಎಂದು ಟ್ವೀಟ್ ಮಾಡಿದ್ದಾರೆ.

ವಿಶ್ವದ ಬಲಿಷ್ಟರಾಷ್ಠ್ರದ ನಾಯಕರೆ ಪ್ರಧಾನಿ ಮೋದಿ ಅವರನ್ನು ಒಪ್ಪಿ ಮೆಚ್ಚಿದ್ದಾರೆ. ಈಕೆ ಯಾರು? ಸಾಧನೆ ಏನು? ನೆಟ್ಟಗೆ ಕನ್ನಡ ಮಾತಾಡಲು ಬರದ ಕಾಡುಪಾಪದಂತೆ ಈಕೆ! ಎಂದು ಟ್ವೀಟ್ ಮಾಡಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭಾಷಣ ಸಂಬಂಧ ನಟಿ ಮತ್ತು ಕಾಂಗ್ರೆಸ್ ಮುಖಂಡರಾದ ರಮ್ಯಾ ಮಾಡಿದ್ದ ವ್ಯಂಗ್ಯಾತ್ಮಕ ಟ್ವೀಟ್ ಗೆ ನಟ ಮತ್ತು ಬಿಜೆಪಿ ಮುಖಂಡ ಜಗ್ಗೇಶ್ ತಿರುಗೇಟು ನೀಡಿದ್ದಾರೆ. ಮತ್ತೊಂದು ಟ್ವೀಟ್ ನಲ್ಲಿ ರಮ್ಯಾ ಅವರ ರಾಜತೀಯ ಪ್ರವೇಶವನ್ನು ವಿಮರ್ಶಿಸಿರುವ ಜಗ್ಗೇಶ್, "ಸ್ಟಾರ್ ಹೋಟಲಲ್ಲಿ ಕೂತು ಅಪ್ಪನ ದುಡ್ಡಲ್ಲಿ ಪಾರ್ಟಿಕೊಟ್ಟು ಪಾರ್ಟು ಗಿಟ್ಟಿಸಿ! ಪ್ರತಿಚಿತ್ರದ ಕ್ಯಾಚ್ಗೆ ಅದೆಸ್ಟಾರ್ ಹೋಟಲ್ ಪಾರ್ಟಿ! ದೊಡ್ಡವರ ನೆರಳಲ್ಲಿ ರಾಜಕೀಯ ಕ್ಯಾಚ್! ಆಮೇಲೆ ಮೆಟ್ಲೇರಕ್ಕೆ ಹೆಡ್ಡಾಫೀಸ್ ಕ್ಯಾಚ್ ಹಾಕ್ದೋರ್ಗೆ ಮೋದಿ ಆದರೇನು ಗಾಂದಿಆದರೇನು ಯಾರಿಗೆ ಬೇಕಾದರು ಹಂಗಿಸುತ್ತಾರೆ! ಕಾರಣ ಶ್ರಮವಿಲ್ಲದೆ ಪಲ್ಲಂಗ ಎರ್ದೋರಲ್ಲವೆ! ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ. ನಟ ಜಗ್ಗೇಶ್ ಅವರ ಈ ಟ್ವೀಟ್ ಇದೀಗ ವ್ಯಾಪಗ ವೈರಲ್ ಆಗುತ್ತಿದೆ.

 

Edited By

Shruthi G

Reported By

Madhu shree

Comments