ಜಿಟಿಡಿ ಪುತ್ರ ಹರೀಶ್ ಗೌಡರನ್ನು ಸೆಳೆಯುವ ಯತ್ನದಲ್ಲಿ ಸೋತ ಕೇಸರಿ ಪಡೆ !?

06 Feb 2018 3:58 PM | Politics
417 Report

ಹರೀಶ್ ಗೌಡ ಅವರನ್ನ ಬಿಜೆಪಿ ಪಕ್ಷಕ್ಕೆ ಸೆಳೆಯಲು ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಮಾತುಕತೆ ನಡೆಸಿ ಪಕ್ಷಕ್ಕೆ ಬಂದರೆ ಮುಂದಿನ ಚುನಾವಣೆಯಲ್ಲಿ ತಮ್ಮ ಮಗನಿಗೆ ವರುಣಾ ಅಥವಾ ಹುಣಸೂರು ಕ್ಷೇತ್ರದಿಂದ ಟಿಕೆಟ್ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಆದರೆ ಈ ಭರವಸೆ ಗೆ ಜಿ.ಟಿ. ದೇವೇಗೌಡ ಸಕಾರತ್ಮಕವಾಗಿ ಸ್ಪಂದಿಸಲಿಲ್ಲ ಎಂದು ಬಿಜೆಪಿ ಮೂಲಗಳು ತಿಳಿಸಿವೆ. 

ಮೈಸೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರಾಗಿರುವ ಶಾಸಕ ಜಿ.ಟಿ. ದೇವೇಗೌಡ ಪುತ್ರ ಹರೀಶ್ ಗೌಡ ಈ ಹಿಂದೆ ಹುಣಸೂರು ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬದಲಾದ ರಾಜಕೀಯದಲ್ಲಿ ಮಾಜಿ ಸಂಸದ ಹೆಚ್.ವಿಶ್ವನಾಥ್ ಜೆಡಿಎಸ್ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್ ನೀಡಲು ವರಿಷ್ಠರು ತೀರ್ಮಾನ ಕೈಗೊಂಡರು. ಇದರಿಂದ ಜೆಡಿಎಸ್ ವರಿಷ್ಠರ ವಿರುದ್ಧ ಮುನಿಸಿಕೊಂಡಿದ್ದ ಜಿ.ಟಿ. ದೇವೇಗೌಡ ಮತ್ತು ಪುತ್ರ ಹರೀಶ್ ಗೌಡ ಸ್ವಪಕ್ಷ ಶಾಸಕರ ವಿರುದ್ಧವೇ ಕಿಡಿಕಾರಿದರು ಎಂಬ ಊಹೆಯ ಮೇರೆಗೆ ಬಿಜೆಪಿ ತನ್ನತ್ತ ಸೆಳೆಯುವ ಪ್ರಯತ್ನ ನಡಿಸಿತು. ಆದರೆ ಈ ಬಗ್ಗೆ ಚಿಂತಿಸಿ ಎಚ್ಚೆತ್ತ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಅವರ ಜೊತೆ ಮಾತುಕತೆ ನಡೆಸಿ ಮುಂದಿನ ದಿನಗಳಲ್ಲಿ ಹರೀಶ್ ಗೌಡರಿಗೆ ಪಕ್ಷದಲ್ಲಿ ಸ್ಥಾನಮಾನ ನೀಡುವ ಭರವಸೆ ಕೊಟ್ಟ ನಂತರ ಮಾಜಿ ಸಂಸದ ವಿಶ್ವನಾಥ್ ಅವರನ್ನ ಬೆಂಬಲಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಬಿಜೆಪಿ ತನ್ನ ಕೈ ಚಳಕ ತೋರಿಸಿ ತನ್ನತ್ತ ಸೆಳೆಯುವ ಪ್ರಯತ್ನ ನಡೆಸಿತು. ನಾನೊಂದು ಪಕ್ಷ, ನನ್ನ ಮಗ ಮತ್ತೊಂದು ಪಕ್ಷದಲ್ಲಿ ಇರಲು ಸಾಧ್ಯವಿಲ್ಲ. ನನ್ನ ಮಗ ಜೆಡಿಎಸ್ ತೊರೆದು ಬಿಜೆಪಿ ಸೇರುವುದಿಲ್ಲ. ಯಾವುದೇ ಕಾರಣಕ್ಕೂ ಪಕ್ಷಾಂತರ ಮಾಡುವುದಿಲ್ಲ. ಮಗನನ್ನು ಬೇರೆ ಪಕ್ಷಕ್ಕೆ ಕಳುಹಿಸುವುದಿಲ್ಲ ಎಂದು ಶಾಸಕ ಜಿ.ಟಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

Edited By

Shruthi G

Reported By

Madhu shree

Comments