ಗಂಗಾವತಿ ಕ್ಷೇತ್ರದಲ್ಲಿ ಇಕ್ಬಾಲ್ ಅನ್ಸಾರಿ ಗೆ ಸೆಡ್ಡು ಹೊಡೆಯಲು ಜೆಡಿಎಸ್ ಮಾಸ್ಟರ್ ಪ್ಲಾನ್..!!

07 Feb 2018 9:47 AM | Politics
3898 Report

ಮಾಜಿ ಪ್ರಧಾನಿ ದೇವೇಗೌಡರು ಎಚ್.ಜಿ.ರಾಮುಲು ಮತ್ತು ಮಾಜಿ ವಿಧಾನಪರಿಷತ್ ಸದಸ್ಯ ಎಚ್.ಆರ್.ಶ್ರೀನಾಥ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಕೊಪ್ಪಳದಲ್ಲಿ ಹೊಸ ರಾಜಕೀಯದ ಇನ್ನಿಂಗ್ಸ್ ಆರಂಭಿಸಿದ್ದಾರೆ.

ಮಾಜಿ ವಿಧಾನಪರಿಷತ್ ಸದಸ್ಯ ಎಚ್.ಆರ್.ಶ್ರೀನಾಥ್ ಅವರು ಇದೇ ತಿಂಗಳ 17ರಂದು ಬೆಂಗಳೂರಿನಲ್ಲಿ ಅಥವಾ ಕೊಪ್ಪಳದಲ್ಲಿ ನಡೆಯಲಿರುವ ಸಮಾವೇಶ ಕಾರ್ಯಕ್ರಮದಲ್ಲಿ ಜೆಡಿಎಸ್ ಗೆ ಸೇರ್ಪಡೆಯಾಗಲಿದ್ದಾರೆ.ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಶ್ರೀನಾಥ್ ಅವರಿಗೆ ಟಿಕೆಟ್ ನೀಡುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ ಇಕ್ಬಾಲ್ ಅನ್ಸಾರಿ ಗೆ ಸೆಡ್ಡು ಹೊಡೆಯಲು ಮಾಜಿ ವಿಧಾನಪರಿಷತ್ ಸದಸ್ಯ ಎಚ್.ಆರ್.ಶ್ರೀನಾಥ್ ಅವರು ಗಂಗಾವತಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.ಸ್ವಕ್ಷೇತ್ರದಲ್ಲಿ ವಾರ್ಡ್ ಭೇಟಿಗೆ ತೆರಳಿದ್ದ ಜೆಡಿಎಸ್ ಬಂಡಾಯ ಶಾಸಕ ಇಕ್ಬಾಲ್ ಅನ್ಸಾರಿ ಅವರತ್ತ ಮಹಿಳೆಯರು ಚಪ್ಪಲಿ, ಕೊಡಪಾನಗಳನ್ನು ತೂರಿದ ಘಟನೆ ನಡೆದಿದೆ. ಈಗಾಗಲೇ ಜನರು ಇಕ್ಬಾಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಾರಿ ಇಕ್ಬಾಲ್ ಅನ್ಸಾರಿಗೆ ಸೋಲು ಕಟ್ಟಿಟ್ಟ ಬುತ್ತಿ, ಜೆಡಿಎಸ್ ಸರಳ ಬಹುಮತದಿಂದ ಕ್ಷೇತ್ರವನ್ನು ವಶಕೆ ಪಡೆಯುವುದರಲ್ಲಿ ಎರಡು ಮಾತಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ.

 

Edited By

Shruthi G

Reported By

Shruthi G

Comments