ಯಶವಂತಪುರ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಬಿಜೆಪಿ ಅಭ್ಯರ್ಥಿ ಯಾರು ಗೊತ್ತಾ?

ಬೆಂಗಳೂರು ನಗರದಲ್ಲಿ ಹೆಚ್ಚು ಕುತೂಹಲ ಹುಟ್ಟಿಸಿರುವ ಕ್ಷೇತ್ರ ಯಶವಂತಪುರ. ಉತ್ತರಹಳ್ಳಿ ಕ್ಷೇತ್ರದ ವ್ಯಾಪ್ತಿಯಲ್ಲಿದ್ದ ಇದು, 2008ರಲ್ಲಿ ಕ್ಷೇತ್ರ ಪುನರ್ ವಿಂಗಡನೆ ಬಳಿಕ ಪ್ರತ್ಯೇಕ ಕ್ಷೇತ್ರವಾಯಿತು. 2008ರಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ ಕ್ಷೇತ್ರದಲ್ಲಿ ಗೆದ್ದಿದ್ದರು.
ಕಳೆದ ಚುನಾವಣೆಯಲ್ಲಿ ಬಿಜೆಪಿ ಕ್ಷೇತ್ರದಲ್ಲಿ 3ನೇ ಸ್ಥಾನ ಪಡೆದಿತ್ತು. ಜೆಡಿಎಸ್ ನಾಯಕ, ವಿಧಾನಪರಿಷತ್ ಸದಸ್ಯ ಬಿಜೆಪಿ ಪುಟ್ಟಣ್ಣ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಅವರು ಪಕ್ಷ ಸೇರಿದರೆ ಬಿಜೆಪಿ ಅಭ್ಯರ್ಥಿಯಾಗುವುದು ಖಚಿತ. ಒಂದು ವೇಳೆ ಬಿಜೆಪಿ ಹೈಕಮಾಂಡ್ ಸಂಸದರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಒಪ್ಪಿಗೆ ನೀಡಿದರೆ, ಶೋಭಾ ಕರಂದ್ಲಾಜೆ ಅವರು ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.ಪುಟ್ಟಣ್ಣ ಅವರು ಪಕ್ಷ ಸೇರದಿದ್ದರೆ ಬಿಡದಿಯ ರುದ್ರೇಶ್, ಯಶವಂತಪುರ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಮಾರೇಗೌಡ ಟಿಕೆಟ್ ಪಡೆಯುವ ಸಾಧ್ಯತೆ ಇದೆ. ಒಂದು ವೇಳೆ ಪಕ್ಷದ ಹೈಕಮಾಂಡ್ ಸಂಸದರಿಗೆ ಟಿಕೆಟ್ ನೀಡಲು ಒಪ್ಪಿದರೆ ಶೋಭಾ ಕರಂದ್ಲಾಜೆ ಅವರು ಅಭ್ಯರ್ಥಿಯಾಗಲಿದ್ದಾರೆ.
Comments