ಜೆಡಿಎಸ್‍ನ ಭದ್ರಕೋಟೆಯಾಗಿರುವ ಬೇಲೂರು ಕ್ಷೇತ್ರದಿಂದ ಸ್ಪರ್ಧಿಸಲಿರುವ ಅಭ್ಯರ್ಥಿ ಯಾರು ಗೊತ್ತಾ?

14 Feb 2018 11:29 AM | Politics
3089 Report

ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದ ಅರ್ಧ ಗಂಟೆಯಲ್ಲಿಯೇ ರೈತರ 54 ಸಾವಿರ ಕೋಟಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಲಾಗುವುದು ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು. ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಯಾವುದೆ ಬ್ಯಾಂಕ್ ಅಥವಾ ಇನ್ನತರೆಯವರು ಸಾಲ ಕಟ್ಟಿ ಎಂದು ಮನೆಗೆ ಬಂದಲ್ಲಿ ಯಾರೂ ಸಹ ಸಾಲ ಕಟ್ಟಬೇಡಿ. ನಾವು ಅಧಿಕಾರಕ್ಕೆ ಬಂದ ತಕ್ಷಣ ರೈತರ 54 ಸಾವಿರ ಕೋಟಿ ಸಾಲ ಮನ್ನಾ ಮಾಡುತ್ತೇವೆ. ಅಲ್ಲದೆ, ರೈತರಿಗೆ ಬೇಕಾದ ಗೊಬ್ಬರ, ಔಷಧಿಗಳನ್ನು ಉಚಿತವಾಗಿ ಕೊಡುತ್ತೇವೆ ಎಂದರು.

ರಾಜ್ಯ ಸರ್ಕಾರಕ್ಕೆ ನಾಚಿಕೆಯಾಗಬೇಕು. ದೇವೇಗೌಡರು ಪ್ರಧಾನಿಯಾಗಿದ್ದಾಗ ಬಡವರಿಗೆ 3 ರೂ.ನಂತೆ 30 ಕೆಜಿ ಅಕ್ಕಿ ಕೊಟಿದ್ದರು. ಆದರೆ, ರಾಜ್ಯ ಸರ್ಕಾರ ಈಗ 7 ಕೆಜಿ ಅಕ್ಕಿ ಕೊಡುತ್ತಿದೆ. ಕುಮಾರಸ್ವಾಮಿ ಅಧಿಕಾರಕ್ಕೆ ಬಂದರೆ ಎತ್ತಿನ ಹೊಳೆ ಯೋಜನೆ ನಿಲ್ಲಿಸುತ್ತಾರೆ ಎಂದು ಈ ಸರ್ಕಾರ ಹೇಳಿಕೊಂಡು ತಿರುಗುತ್ತಿದೆ. ಆದರೆ, ಕುಮಾರಸ್ವಾಮಿಯವರು ಎತ್ತಿಹೊಳೆ ಯೋಜನೆಯಲ್ಲಿ ಹಣ ಹೊಡೆಯುವ ಕೆಲಸವನ್ನು ಈ ಸರ್ಕಾರ ಮಾಡುತ್ತಿದೆ. ಇದನ್ನು ನಿಲ್ಲಿಸುವುದಾಗಿ ಹೇಳಿದ್ದಾರೆ. ಆದರೆ, ಇದನ್ನು ಸರ್ಕಾರ ಬೇರೆ ರೀತಿ ಹೇಳಿ ಅಪಪ್ರಚಾರ ಮಾಡುತ್ತಿದೆ ಎಂದರು.ಕಾರ್ಯಕರ್ತರು ತಮ್ಮಲ್ಲಿನ ಭಿನ್ನಾಭಿಪ್ರಾಯ ಬಿಟ್ಟು ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿ ಗೆಲ್ಲಿಸಬೇಕು. ಇಲ್ಲಿನ ಅಭ್ಯರ್ಥಿಯನ್ನು ಪಕ್ಷದ ವರಿಷ್ಠರೆ ಅಂತಿಮವಾಗಿ ತೀರ್ಮಾನಿಸಲಿದ್ದಾರೆ. ನಮಗೆ ಪಕ್ಷ ಮುಖ್ಯವೆ ಹೊರತು ವ್ಯಕ್ತಿಯಲ್ಲ. ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು. ಕಾರ್ಯಕರ್ತರ ಸಭೆಯಲ್ಲಿ ಸಾಕಷ್ಟು ಕಾರ್ಯಕರ್ತರು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್‍ಗೆ ಈ ಬಾರಿ ಟಿಕೆಟ್ ಕೊಡಬೇಕೆಂದು ಘೋಷಣೆ ಕೂಗಿದರು.ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್, ತಾಲೂಕಾಧ್ಯಕ್ಷ ತೋ.ಚ.ಸುಬ್ಬರಾಯ. ಕಾರ್ಯಾಧ್ಯಕ್ಷ ಮಂಜುನಾಥ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಂ.ಎ.ನಾಗರಾಜು, ತಾಪಂ ಅಧ್ಯಕ್ಷ ಹರೀಶ್, ಉಪಾಧ್ಯಕ್ಷೆ ಕಮಲಮ್ಮ, ಪುರಸಭೆ ಅಧ್ಯಕ್ಷೆ ಭಾರತಿ ಅರುಣ್‍ಕುಮಾರ್, ಜಿಪಂ ಸದಸ್ಯರಾದ ಲತಾ ದಿಲೀಪ್‍ಕುಮಾರ್, ಲತಾಮಂಜೇಶ್ವರಿ, ಮಾಜಿ ಅಧ್ಯಕ್ಷರಾದ ಚಂದ್ರೇಗೌಡ, ಜಿ.ಟಿ.ಇಂದಿರಾ, ಜೆಡಿಎಸ್ ಯುವ ಅಧ್ಯಕ್ಷ ಉಮೇಶ್, ಈಶ್ವರ್ ಪ್ರಸಾದ್ ಇನ್ನಿತರರಿದ್ದರು.

 

Edited By

Shruthi G

Reported By

Shruthi G

Comments