ಮೈತ್ರಿ ಕುರಿತು ‘ಕೈ-ಕಮಲ’ ಕ್ಕೆ ಬಿಗ್ ಶಾಕ್ ಕೊಟ್ಟ ಎಚ್ ಡಿಕೆ..!!

01 Mar 2018 9:58 AM | Politics
13069 Report

ಕಾಂಗ್ರೆಸ್ ಮತ್ತು ಬಿಜೆಪಿ ಹೊರತಾದ ಸರ್ಕಾರ ರಚನೆಗೆ ಜೆಡಿಎಸ್ ಪ್ರಯತ್ನ ನಡೆಸಿದ್ದು, ಓವೈಸಿ ಸೇರಿದಂತೆ ಇತರ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಕುರಿತು ಇನ್ನೊಂದು ವಾರದಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಆಲಮೇಲದಲ್ಲಿ ಮಾತನಾಡಿದ ಅವರು, ಎಲ್ಲ ಸಣ್ಣಪುಟ್ಟ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗುವುದು. ಆದರೆ, ಕರ್ನಾಟಕದ ಹಿತವನ್ನು ಈ ಸಂದರ್ಭದಲ್ಲಿ ಪರಿಗಣಿಸಲಾಗುವುದು.  ಓವೈಸಿ ಅಷ್ಟೇ ಅಲ್ಲ, ಬೇರೆ ಪಕ್ಷಗಳ ಮುಖಂಡರೊಂದಿಗೂ ಈ ದಿಸೆಯಲ್ಲಿ ಚರ್ಚೆ ನಡೆದಿದೆ ಎಂದು ತಿಳಿಸಿದರು.ರಾಜ್ಯಸಭೆ ಚುನಾವಣೆಯಲ್ಲಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಬಬಲೇಶ್ವರದಲ್ಲಿ ಬಿಎಸ್ಪಿಗೆ ಸೀಟು ಬಿಟ್ಟುಕೊಟ್ಟಿರುವುದರ ಹಿಂದೆ ಜಲಸಂಪನ್ಮೂಲ ಸಚಿವ ಡಾ.ಎಂ.ಬಿ. ಪಾಟೀಲ ಅವರ ಜೊತೆ ಯಾವುದೇ ಒಳ ಒಪ್ಪಂದ ಮಾಡಿಕೊಂಡಿಲ್ಲ ಎಂದು ಹೇಳಿದರು. ಪ್ರಧಾನಿ ಸುಬ್ಬರಾಯನಕಟ್ಟೆ ರೀತಿಯಲ್ಲಿ ಭಾಷಣ ಮಾಡುವುದನ್ನು ಕೈ ಬಿಡಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣೆ ಭಾಷಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ತಮ್ಮ ಹುದ್ದೆಯ ಘನತೆಗೆ ತಕ್ಕಂತೆ ಪ್ರಧಾನಿ ಮಾತನಾಡಬೇಕು ಎಂದು ಹೇಳಿದರು.ಕಾರ್ತಿ ಚಿದಂಬರಂ ಬಂಧಿಸಲಾಗಿದ್ದರೂ ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು. ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಯಾವ ರೀತಿ ಕ್ರಮ ಕೈಗೊಳ್ಳುತ್ತೆ ಕಾದು ನೋಡೋಣ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಾಜಿ ಸಚಿವ, ಸಿಂದಗಿ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹಾಗೂ ಜೆಡಿಎಸ್ ವಿಜಯಪುರ ಜಿಲ್ಲಾಧ್ಯಕ್ಷ ಎಂ. ಸಿ. ಮನಗೂಳಿ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

Edited By

Shruthi G

Reported By

Shruthi G

Comments