ರಾಜ್ಯಸಭಾ ಚುನಾವಣೆಗೆ ಜೆಡಿಎಸ್ ನಿಂದ ಬಿ.ಎಂ.ಫಾರೂಕ್ ನಾಮಪತ್ರ ಸಲ್ಲಿಕೆ

09 Mar 2018 5:08 PM | Politics
4111 Report

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಜೆಡಿಎಸ್ ರಾಷ್ಟ್ರೀಯ ಮಹಾ ಪ್ರಧಾನಕಾರ್ಯದರ್ಶಿ ಬಿ.ಎಂ.ಫಾರೂಕ್ ಇಂದು ನಾಮಪತ್ರ ಸಲ್ಲಿಸಿದರು. ಚುನಾವಣಾ ಅಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಮೂರ್ತಿ ಅವರಿಗೆ ಫಾರೂಕ್ ತಮ್ಮ ನಾಮಪತ್ರ ಸಲ್ಲಿಸಿದರು.

ಕಳೆದ ಬಾರಿಯೂ ಜೆಡಿಎಸ್ ಅಭ್ಯರ್ಥಿಯಾಗಿ ಫಾರೂಕ್ ಸ್ಪರ್ಧಿಸಿ ಪರಾಭವಗೊಂಡಿದ್ದರು. ಮತ್ತೆ ಜೆಡಿಎಸ್ ಅಭ್ಯರ್ಥಿಯಾಗಿ ಈ ಬಾರಿ ರಾಜ್ಯಸಭೆ ಚುನಾವಣಾ ಕಣಕ್ಕಿಳಿದಿದ್ದಾರೆ. ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕೂ ಸ್ಥಾನಗಳಿಗೆ ಮಾ.23ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಸೋಮವಾರ ಕಡೆಯ ದಿನವಾಗಿದೆ. ಆದರೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮ ತಮ್ಮ ಅಭ್ಯರ್ಥಿಗಳು ಯಾರೆಂಬುದನ್ನು ಅಧಿಕೃತವಾಗಿ ಪ್ರಕಟಿಸಿಲ್ಲ. ಫಾರೂಕ್ ಅವರು ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ.ರೇವಣ್ಣ ಸೇರಿದಂತೆ ಜೆಡಿಎಸ್‍ನ ಹಲವು ಶಾಸಕರು ಉಪಸ್ಥಿತರಿದ್ದರು.

 

Edited By

Shruthi G

Reported By

Shruthi G

Comments