ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ಇಂದು ಬಿಗಿ ಬಂದೋಬಸ್ತಿಗೆ ಕಾರಣ...? 

19 Mar 2018 12:17 PM | Politics
429 Report

ಇಂದು ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಪ್ರತ್ಯೇಕ ಲಿಂಗಾಯತ ಧರ್ಮ ಚರ್ಚೆ ನಡೆಯಲಿದೆ. ನ್ಯಾ. ಮೋಹನ್ ದಾಸ್ ವರದಿಗೆ ಒಪ್ಪಿಗೆ ಸೂಚಿಸಿ ಲಿಂಗಾಯ ಪ್ರತ್ಯೇಕ ಧರ್ಮ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಕಳುಹಿಸುವ ಬಗ್ಗೆ ಚರ್ಚೆ ನಡೆಯಲಿದೆ.

ಈ ಬಗ್ಗೆ ಇಂದಿನ ಸಭೆಯಲ್ಲಿ ತೀರ್ಮಾನ ನಡೆಯಲಿರುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು, ಪ್ರತಿಭಟನೆಗಳು ನಡೆಯುವ ಸಾಧ್ಯತೆ ಇರುವುದರಿಂದ ಮುನ್ನಚ್ಚರಿಕೆ ಕ್ರಮವಾಗಿ ಸಿಎಂ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.

 

Edited By

Shruthi G

Reported By

Madhu shree

Comments