ಪ್ರತ್ಯೇಕ ಲಿಂಗಾಯತ ಧರ್ಮ ಕೂಗಿಗೆ ಕೊನೆಗೂ ಅಸ್ತು ಎಂದ್ರು ಸಿಎಂ

19 Mar 2018 5:30 PM | Politics
510 Report

ಲಿಂಗಾಯತ ಸ್ವತಂತ್ರ ಧರ್ಮ ರಚನೆ ಸಂಬಂಧ ನ್ಯಾ. ನಾಗಮೋಹನ್ ದಾಸ್ ಸಮಿತಿ ನೀಡಿದ ವರದಿಯನ್ನು ರಾಜ್ಯ ಸಚಿವ ಸಂಪುಟ ಸಭೆ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ.

ಇನ್ನು ಇದೇ ಸಂಪುಟ ಸಭೆಯ ನಂತರ ಮಾಧ್ಯಮದರೊಂದಿಗೆ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, 'ಇಂದು ಐತಿಹಾಸಿಕ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಮಿತಿ ನೀಡಿದ್ದ ವರದಿ ಬಗ್ಗೆ ಇಂದು ಚರ್ಚೆ ನಡೆಯಿತು. ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ನಿರ್ಧರಿಸಿದೆ. ನಾನು ಸಿಎಂ ಸಿದ್ದರಾಮಯ್ಯನವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಅಂತ ಹೇಳಿದರು.

Edited By

Shruthi G

Reported By

Madhu shree

Comments