ತಮ್ಮಮಾಜಿ ಶಿಷ್ಯನ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ 'ದೇವೇಗೌಡ್ರು

06 Apr 2018 11:01 AM | Politics
419 Report

ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಕೋಲಾಹಲವೇಳುವುದು ಸಹಜ ಆದರೆ ಚುನಾವಣಾ ನೀತಿ ಸಂಹಿತೆಗೆ ಬದ್ಧರಾಗಿರುವುದು ಎಲ್ಲಾ ರಾಜಕೀಯ ಪಕ್ಷಗಳ ಕರ್ತವ್ಯವಾಗಿರುತ್ತದೆ. ಹೀಗಿದ್ದರೂ ಕೆಲವೊಮ್ಮೆ ಚುನಾವಣಾ ಆಯೋಗಕ್ಕೆ ಮಣ್ಣೆರಚುವ ಕಾರ್ಯಗಳು ನಡೆಯುತ್ತವೆ.

ಅದೇ ರೀತಿ ಇದೀಗ ಮಾಜಿ ಪ್ರಧಾನಿ ದೇವೇಗೌಡರವರು ತಮ್ಮ ಮಾಜಿ ಶಿಷ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ ಅಧಿಕಾರದ ಪ್ರಭಾವ ಬಳಸಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಹಕರಿಸುವಂತೆ ಮಾಡಿಕೊಂಡಿದ್ದಾರೆ ಎಂದು ದೇವೇಗೌಡ ಅವರು ಆರೋಪಿಸಿದ್ದಾರೆ.

'ಸಿದ್ದರಾಮಯ್ಯ ಅವರು ಗೃಹ ಇಲಾಖೆ ದುರ್ಬಳಕೆ ಮಾಡಿಕೊಂಡು ಪೊಲೀಸ್ ವಾಹನಗಳಲ್ಲಿ, ಆಂಬುಲೆನ್ಸ್‌ಗಳಲ್ಲಿ ಹಣ ಸಾಗಾಟ ಮಾಡುತ್ತಿದ್ದಾರೆ' ಎಂದು ಗಂಭೀರ ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿ ಕಚೇರಿಯ ಸಿಬ್ಬಂದಿ ಚುನಾವಣೆಗಾಗಿ ಹಣ ಸಂಗ್ರಹ ಸಹ ಮಾಡುತ್ತಿದ್ದಾರೆ, ಗೃಹ ಇಲಾಖೆ ಸಲಹೆಗಾರ ಕೆಂಪಯ್ಯ ಅವರು ತಮ್ಮ ಪ್ರಭಾವ ಬಳಸಿ ಪೊಲೀಸ್ ಇಲಾಖೆ ಕಾಂಗ್ರೆಸ್‌ಗೆ ಬೆಂಬಲಿಸುವಂತೆ ನೋಡಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.

 

Edited By

Shruthi G

Reported By

Madhu shree

Comments