ಚುನಾವಣೆಯ ಮತದಾನದ ಸಮಯದಲ್ಲಿ ಹೆಚ್ಚಳ

19 Apr 2018 6:03 PM | Politics
543 Report

ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಮತದಾನದ ವೇಳೆ ಬಿಸಿಲಿನ ಧಗೆಯಿಂದ ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯವಾದ ಮುನ್ನೆಚ್ಚರಿಕೆ ಕ್ರಮಗಳನ್ನು ಚುನಾವಣಾ ಆಯೋಗ ಕೈಗೊಂಡಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯು ಬೇಸಿಗೆ ಕಾಲದಲ್ಲಿ ನಡೆಯುತ್ತಿರುವುದರಿಂದ ಜನರು ಸಹಜವಾಗಿ ಬಿಸಿಲಿನ ತಾಪಮಾನಕ್ಕೆ ಹೆದರಿ ಮತಚಲಾವಣೆ ಮಾಡದೇ ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳುವುದು ಹೆಚ್ಚಾಗುವುದು ಕಂಡು ಬಂದಿದೆ.

ಈ ಬಾರಿಯ ವಿಧಾನಸಭಾ ಚುನಾವಣೆಯ ಮತದಾನದ ಸಮಯವನ್ನು ಒಂದು ಗಂಟೆಗಳ ಕಾಲ ಹೆಚ್ಚಳ ಮಾಡಲಾಗಿದೆ. ಮಧ್ಯಾಹ್ನ ಮತದಾನಕ್ಕೆ ಮತದಾರರು ಬರುವ ಸಾಧ್ಯತೆ ಕಡಿಮೆ ಇದೆ. ಇದಲ್ಲದೇ ಹೊಸದಾಗಿ ಈ ಬಾರಿ ವಿವಿಪಿಟಿಯನ್ನು ಅಳವಡಿಕೆ ಮಾಡಲಾಗಿದೆ. ಹೀಗಾಗಿ ಹೆಚ್ಚುವರಿ ಒಂದು ಗಂಟೆ ಮತದಾನದಲ್ಲಿ ಏರಿಕೆ ಮಾಡಲಾಗಿದೆ ಅಂತ ಮಾಹಿತಿ ನೀಡಿದರು. ಬೆಳಿಗ್ಗೆ 7 ಗಂಟೆಯಿಂದ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿದೆ ಅಂತ ಇದೇ ಎಂದು ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ತಿಳಿಸಿದ್ದಾರೆ.

Edited By

Manjula M

Reported By

Manjula M

Comments