ಈ ಬಾರಿ ರಾಜ್ಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಏನಿರಬಹುದು?  

27 Apr 2018 11:45 AM | Politics
481 Report

 ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಎಲ್ಲಾ ಪಕ್ಷದವರು ತಮ್ಮ ತಮ್ಮ ಪ್ರನಾಳಿಕೆಗಳನ್ನು ಸಿದ್ದ ಪಡಿಸಿಕೊಳ್ಳುತ್ತಿದ್ದಾರೆ . ಇದೀಗ ಕಾಂಗ್ರೆಸ್ ನ ಸರದಿ. ರಾಜ್ಯ ವಿಧಾನಸಭಾ ಚುನಾವಣೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಇಂದು ಮಂಗಳೂರಿನಲ್ಲಿ ಹಾಗೂ ಸ್ವತಃ ಎಐಸಿಸಿ ಅಧ್ಯಕ್ಷರಿಂದ ಕಾಂಗ್ರೆಸ್‌ನ ರಾಜ್ಯ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ಸೇರಿದಂತೆ ಪಕ್ಷದ ಘಟಾನುಘಟಿ ನಾಯಕರು ಇದಕದಕೆ ಸಾಕ್ಷಿಯಾಗಲಿದ್ದಾರೆ. ಈ ವಿಷಯದ ಬಗ್ಗೆ ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾದ ಎಂ.ವೀರಪ್ಪ ಮೊಯ್ಲಿ, ಈ ಬಾರಿ ಜನಮುಖಿ ಪ್ರಣಾಳಿಕೆಯನ್ನು ನೀಡುತಿದೆ. ಇದು ರಾಜ್ಯ, ಪ್ರಾದೇಶಿಕ ಮತ್ತು ಕಂದಾಯ ವಿಭಾಗಗಳಾಗಿ ಮೂರು ಭಾಗಗಳನ್ನು ಒಳಗೊಂಡಿರುತ್ತದೆ. ಅಷ್ಟೆ ಅಲ್ಲದೆ ಪ್ರತಿ ಜಿಲ್ಲೆಗೊಂದರಂತೆ ರಾಜ್ಯದ 30 ಜಿಲ್ಲೆಗಳಿಗೂ ಆಯಾ ಜಿಲ್ಲೆಯ ಬೇಡಿಕೆಗಳಿಗೆ ಅನುಗುಣವಾಗಿಯೇ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.  ಪ್ರಣಾಳಿಕೆ ತಯಾರಿಕೆಗೆ 4 ತಿಂಗಳ ಹಿಂದೆ 15 ಮಂದಿಯ ಸಮಿತಿಯು ರಚನೆಯಾಗಿತ್ತು. ಆರಂಭದಲ್ಲಿ ರಾಜ್ಯವನ್ನು 6 ವಿಭಾಗಗಳನ್ನಾಗಿ ವಿಂಗಡಿಸಲಾಗಿದ್ದು, ಪ್ರತಿ ವಿಭಾಗದಲ್ಲೂ ರೈತ,ತಜ್ಞರು, ಕಾರ್ಮಿಕ, ಕೈಗಾರಿಕೆ ಇತ್ಯಾದಿ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು, ಜನರು, ತಳ ಹಂತದಿಂದ ಹಿಡಿದು ನಾಯಕರವರೆಗಿನ ಕಾಂಗ್ರೆಸ್‌ ಕಾರ್ಯಕರ್ತರನ್ನು ಒಗ್ಗೂಡಿಸಿ ಚರ್ಚೆ ನಡೆಸಿದ್ದೇವೆ. ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಶಿಕ್ಷಣ ಇತ್ಯಾದಿ ಎಲ್ಲ ಕ್ಷೇತ್ರಗಳ ವಿಚಾರಗಳ ಸಮಾಲೋಚನೆಯನ್ನು ಕೂಡ ನಡೆಸಿದ್ದೇವೆ. ಬುಡಕಟ್ಟು ಜನರ ವಿಚಾರದ ಕುರಿತೂ  ಅಧ್ಯಯನ ನಡೆಸಿದ್ದು, ಇವೆಲ್ಲ ಅಂಶಗಳನ್ನೂ ಪ್ರಣಾಳಿಕೆಯಲ್ಲಿ ಸೇರಿಸಿಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.ಮಂಗಳೂರಿನ ಟಿ.ಎಂ.ಎ. ಪೈ ಹಾಲ್ ನಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಬಿಡುಗಡೆ ಮಾಡಿದ್ದಾರೆ.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ವೀರಪ್ಪ ಮೊಯ್ಲಿ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮೊದಲಾದವರು ಭಾಗವಹಿಸಿದ್ದರು. ಹಿರಿಯ ಕಾಂಗ್ರೆಸ್ ನಾಯಕ ಜನಾರ್ಧನ ಪೂಜಾರಿ ಬಹುದಿನಗಳ ನಂತರ ಪಕ್ಷದ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು. ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ರಾಹುಲ್ ಗಾಂಧಿ, ಕಳೆದ ಬಾರಿ ಪ್ರಣಾಳಿಕೆಯಲ್ಲಿ ನೀಡಿದ್ದ ಶೇ. 99 ರಷ್ಟು ಭರವಸೆ ಈಡೇರಿಸಿದ್ದೇವೆ. ಬಸವಣ್ಣನವರ ನುಡಿದಂತೆ ನಡೆ ಆಶಯದಂತೆ ನಮ್ಮ ಸರ್ಕಾರ ಕೆಲಸ ಮಾಡಿದೆ. ಈಗ ಬಿಡುಗಡೆ ಮಾಡಲಾಗಿರುವ ಪ್ರಣಾಳಿಕೆ ಪಕ್ಷದ ಭರವಸೆ ಮಾತ್ರವಲ್ಲ, ಅದು ರಾಜ್ಯದ ಜನರ ಧ್ವನಿಯಾಗಿ ಕಾಂಗ್ರೆಸ್ ಇದೆ ಎಂದು ಹೇಳಿದ್ದಾರೆ.

 

Edited By

Manjula M

Reported By

Manjula M

Comments