ಗಣಿಧಣಿ ಜನಾರ್ಧನ ರೆಡ್ಡಿಗೆ 'ಸುಪ್ರೀಂ' ಶಾಕ್..!

04 May 2018 3:44 PM | Politics
773 Report

ರಾಜ್ಯ ವಿಧಾನ ಸಭಾ ಚುನಾವಣಾ ಹಿನ್ನಲೆಯಲ್ಲಿ ಗಣಿ ಧಣಿ ಗಾಲಿ ಜನಾರ್ಧನ ರೆಡ್ಡಿ ಬಳ್ಳಾರಿಯಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ಮಾಡದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ತಿರ್ಪನ್ನು ನೀಡಿದೆ. ಬಹುಕೋಟಿ ರೂ.ಗಳ ಅಕ್ರಮ ಗಣಿ ಹಗರಣದ ಸಂಬಂಧ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ರೆಡ್ಡಿಗೆ ಸರ್ವೋಚ್ಚ ನ್ಯಾಯಾಲಯದ ಈ ಆದೇಶದೊಂದಿಗೆ ಭಾರೀ ಮುಖಭಂಗವಾಗಿದೆ.

ಮೇ 12ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ತಮ್ಮ ಸಹೋದರ ಸೋಮಶೇಖರ್ ರೆಡ್ಡಿ ಅವರ ಪರ ಪ್ರಚಾರ ನಡೆಸಲು ತಮಗೆ ಅನುಮತಿ ನೀಡಬೇಕೆಂದು ಜನಾರ್ಧನ ರೆಡ್ಡಿ ಸುಪ್ರೀಂಕೋರ್ಟ್‍ಗೆ ಮನವಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ನೀವು ಆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುವಂತಿಲ್ಲ ಎಂದು ರೆಡ್ಡಿ ಕೋರಿಕೆಯನ್ನು ವಜಾಗೊಳಿಸಿತ್ತು. ಭ್ರಷ್ಟಾಚಾರದ ಆರೋಪವನ್ನು ಎದುರಿಸುತ್ತಿರುವ ರೆಡ್ಡಿಯನ್ನು ತಮ್ಮ ಪಕ್ಷದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದೂರುವಿಟ್ಟಿದ್ದರೂ ಅವರು ಬಿಜೆಪಿ ಪರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಅಷ್ಟೆ ಅಲ್ಲದೆ ಬುಧವಾರ ಮೊಳಕಾಲ್ಮೂರು ಕ್ಷೇತ್ರದಲ್ಲಿ ತಮ್ಮ ಆಪ್ತ ಸ್ನೇಹಿತ ಶ್ರೀರಾಮುಲು ಪರವೂ ಪ್ರಚಾರವನ್ನು ಮಾಡಿದ್ದರು. ಹಾಗಾಗಿ ಸುಪ್ರೀಂ ಕೋರ್ಟ್ ಗೆ ಜನಾರ್ಧನ್ ರೆಡ್ಡಿ ಸಲ್ಲಿಸಿದ ಮನವಿಯನ್ನು ತಿರಸ್ಕರಿಸಿದೆ.

 

Edited By

Manjula M

Reported By

Manjula M

Comments