ಬಿಗ್ ಬ್ರೇಕಿಂಗ್ : ಬಿಜೆಪಿ ಪಕ್ಷದ ವಿರುದ್ಧ ಮತ್ತೊಂದು ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಸಚಿವ ಡಿಕೆಶಿ

18 May 2018 10:20 AM | Politics
58761 Report

ಈ ಬಾರಿ ವಿಧಾನಸಭಾ ಚುನಾವಣೆ ಭಾರೀ ಕುತೂಹಲ ಕೆರಳಿಸಿದ್ದು, ಈಗಾಗಲೇ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವುದಕ್ಕೆ ಯಾವುದೇ ಪಕ್ಷಗಳಿಗೆ ಸರಿಯಾಗಿ ಬಹುಮತ ಬಾರದೇ ಇರುವುದರಿಂದ ಎಲ್ಲಾ ರಾಜಕೀಯ ಪಕ್ಷಗಳು ಅನ್ಯ ಪಕ್ಷದ ಶಾಸಕರುಗಳನ್ನು ತಮ್ಮತ್ತ ಸೆಳೆಯವುದಕ್ಕೆ ಮುಂದಾಗಿದೆ. ಪೊಲೀಸ್ ಭದ್ರತೆಯನ್ನು ವಾಪಸ್ ಪಡೆದ ಬೆನ್ನಲ್ಲೇ ಈಗಲ್‍ಟನ್ ರೆಸಾರ್ಟ್ ನಲ್ಲಿದ್ದ ಶಾಸಕರು ಬೇರೆ ಸ್ಥಳಕ್ಕೆ ಶಿಫ್ಟ್ ಆಗುತ್ತಿದ್ದಾರೆ.

ಬಿಡದಿಯ ಈಗಲ್‍ಟನ್ ರೆಸಾರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು, ಮಾಜಿ ಸಚಿವ ಜನಾರ್ದನ ರೆಡ್ಡಿ ನಮ್ಮ ಶಾಸಕರಿಗೆ ಕರೆ ಮಾಡುವ ಮೂಲಕ ಆಪರೇಷನ್ ಕಮಲಕ್ಕೆ ಕೈ ಹಾಕಿದ್ದಾರೆ. ಬಿಜೆಪಿಯವರು ರೆಡ್ಡಿ ನಮ್ಮ ಪಕ್ಷದಲ್ಲಿ ಇಲ್ಲ ಎಂದು ಹೇಳುತ್ತಾರೆ. ಆದರೆ ಅವರೇ ನಮ್ಮ ಶಾಸಕರಿಗೆ ಕರೆ ಮಾಡುತ್ತಿದ್ದಾರೆ ಎಂಬ ಸ್ಪೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ ಹೇಳಿದರು. ಶಾಸಕರನ್ನು ಒತ್ತೆಯಿಟ್ಟು ಕಾಂಗ್ರೆಸ್, ಜೆಡಿಎಸ್ ಗುಂಡಾಗಿರಿ ಮಾಡುತ್ತಿದ್ದಾರೆ ಎನ್ನುವ ಬಿಎಸ್‍ವೈ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅಧಿಕಾರ ಸಿಕ್ಕಿದ ಕೂಡಲೇ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ. ರಾಮನಗರದ ಎಸ್‍ಪಿಯನ್ನು ವರ್ಗಾವಣೆ ಮಾಡಿದ್ದಾರೆ. 100 ಜನ ಶಾಸಕರಿದ್ದು ನಮ್ಮ ರಕ್ಷಣೆಗಿದ್ದ ಪೊಲೀಸರನ್ನು ವಾಪಸ್ ಮಾಡಲಾಗಿದೆ. ಈ ರೀತಿ ಮಾಡುವುದು ಗುಂಡಾಗಿರಿ ಎಂದು ತಿರುಗೇಟು ನೀಡಿದರು.

 

Edited By

Shruthi G

Reported By

Shruthi G

Comments