ವಿಶ್ವಾಸಮತ ಯಾಚನೆ ಹಿನ್ನಲೆ- ವಿಧಾನಸೌಧಕ್ಕೆ ಪೊಲೀಸ್ ಸರ್ಪಗಾವಲು..!

19 May 2018 11:15 AM | Politics
388 Report

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಶ್ವಾಸ ಮತ ಯಾಚನೆ ಪ್ರಕ್ರಿಯೆಗೆ ಕ್ಷಣಗಣನೆ ಶುರುವಾಗಿದೆ. ಅಂತಯೇ ವಿಧಾನಸೌಧಕ್ಕೆ ಭಾರಿ ಪೊಲೀಸ್ ಬಿಗಿ ಬಂದೋಬಸ್ತ್ ಅನ್ನು ಒದಗಿಸಲಾಗಿದೆ.

ವಿಶ್ವಾಸಮತ ಯಾಚನೆಗೆ ಸಂಬಂಧ ಪಟ್ಟಂತೆ ನಿನ್ನೆ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಭದ್ರತೆ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯದ ಐಜಿ-ಡಿಜಿಪಿ ಅವರಿಗೆ ವಹಿಸಿದೆ. ಹೀಗಾಗಿ ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ತಡೆಯಲು ವಿಧಾನಸೌಧ ಮತ್ತು ವಿಕಾಸ ಸೌಧಕ್ಕೆ ಭಾರಿ ಪೊಲೀಸ್ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಇಂದು ಸಂಜೆ ನಾಲ್ಕು ಗಂಟೆಯ ಒಳಗೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಬಹುಮತ ಸಾಬೀತು ಪಡಿಸಲು ಸುಪ್ರೀಂಕೋರ್ಟ್ ಗೆ​ ಆದೇಶ ನೀಡಿದ ಹಿನ್ನೆಲೆಯಲ್ಲಿ ವಿಧಾನ ಸೌಧ ಸುತ್ತಮುತ್ತಲೂ 2 ಕಿ.ಮೀ.ವರೆಗೆ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಬಹುಮತ ಸಾಬೀತಿನ ಜೊತೆ ಬೆಳಗ್ಗೆ 11 ಗಂಟೆಗೆ 221 ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇನ್ನು ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ನಗರ ಪೊಲೀಸ್​ ಆಯುಕ್ತ ಸುನೀಲ್​ ಕುಮಾರ್​ ಅವರು ವಿಧಾನಸೌಧ ಆವರಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Edited By

Manjula M

Reported By

Manjula M

Comments