ಯಡಿಯೂರಪ್ಪ ಸರ್ಕಾರ ಮುಕ್ತಾಯ:ಕಾಂಗ್ರೆಸ್-ಜೆಡಿಎಸ್ ಮೈತ್ರಿಪರ್ವ ಪ್ರಾರಂಭ

19 May 2018 4:49 PM | Politics
1622 Report

ರಾಜ್ಯ ಚುನಾವಣೆಯ ಹಿನ್ನಲೆಯಲ್ಲಿ ಬಹುಮತ ಸಾಬೀತಿಗೆ ಅಗತ್ಯ ಶಾಸಕರ ಬೆಂಬಲ ಸಿಗದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಜಯ ಸಿಕ್ಕಂತಾಗಿದೆ.  ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಹಿನ್ನೆಲೆಯಲ್ಲಿ ರಾಜ್ಯಪಾಲ ವಿ.ಆರ್.ವಾಲಾ ಅವರು ಬಿ.ಎಸ್.ಯಡಿಯೂರಪ್ಪ ಅವರಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿ ವಿಶ್ವಾಸಮತ ಸಾಬೀತುಪಡಿಸಲು 15 ದಿನಗಳ ಸಮಯವನ್ನು ಕೂಡ  ನೀಡಿದ್ದರು.

ಅಂತಿಮವಾಗಿ ಬಿಜೆಪಿ ತನಗೆ ಅಗತ್ಯವಿರುವ ಏಳು ಶಾಸಕರನ್ನು ಒಂದುಗೂಡಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸಮತ ಯಾಚಿಸುವ ಗೋಜಿಗೆ ಹೋಗಲಿಲ್ಲ.  ಕೇವಲ ಭಾಷಣ ಮಾಡಿ ತಮ್ಮ ಅಳಲು ತೋಡಿಕೊಂಡು ರಾಜ್ಯಪಾಲರನ್ನು ಭೇಟಿಯಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆಯನ್ನು ಮಾಡಿದರು. ಈ ಬೆಳವಣಿಗೆಯಿಂದ ಬಿಜೆಪಿ ತನ್ನ ಸರ್ಕಾರ ರಚನೆ ಕನಸನ್ನು ಕೈಬಿಟ್ಟಂತಾಗಿದ್ದು, ಅಂತಿಮವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟಕ್ಕೆ ಜಯ ಲಭಿಸಿದೆ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ 25ನೆ ಮುಖ್ಯಮಂತ್ರಿಯಾಗಿ ಒಂದೆರಡು ದಿನಗಳಲ್ಲಿ ಪ್ರಮಾಣ ವಚನ ಸ್ವೀಕರಿಸುವ ಎಲ್ಲಾ ರೀತಿಯ ಸಾಧ್ಯತೆಗಳಿವೆ.

 

Edited By

Manjula M

Reported By

Manjula M

Comments