ಕರ್ನಾಟಕದ 25ನೇ  ನೂತನ ಮುಖ್ಯಮಂತ್ರಿಯಾದ ಎಚ್'ಡಿಕೆ

23 May 2018 5:15 PM | Politics
1076 Report

ಜೆಡಿಎಸ್ ನ ವರಿಷ್ಠ ಎಚ್.ಡಿ.ದೇವೇಗೌಡ ಅವರ ಮೂರನೇ ಮಗನಾದ ಎಚ್ ಡಿ ಕುಮಾರಸ್ವಾಮಿ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಮೇ 23ರಂದು 4.32 ನಿಮಿಷದ ಸುಮಾರಿಗೆ ದೇವರು ಹಾಗೂ ಕನ್ನಡ ನಾಡಿನ ಜನರ ಹೆಸರಿನಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ.

ಈ ಮೂಲಕ ವಿಧಾನಸೌಧದ ಮುಂಭಾಗದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯ ನೂತನ ಸರ್ಕಾರದ ರಚನೆಯಾಗಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದಲ್ಲಿ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಕಂಡು ಬಂದಿತ್ತು. ಮಳೆಯ ನಡುವೆ ಜಯಘೋಷಗಳ ನಡುವೆ ಪ್ರಮಾಣ ವಚನ ಸ್ವೀಕಾರ ಸಮಾರಂಭವು ನಡೆಯಿತು. ರಾಜ್ಯಪಾಲ ವಜುಭಾಯಿವಾಲ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸೋನಿಯಾಗಾಂಧಿ, ರಾಹುಲ್ ಗಾಧಿ, ಮಾಯಾವತಿ, ಶರದ್​ ಪವಾರ್​, ಅಖಿಲೇಶ್​ ಯಾದವ್, ​ಕೇರಳ ಸಿಎಂ ಪಿಣರಾಯಿ, ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

 

Edited By

Manjula M

Reported By

Manjula M

Comments