ವಿಶ್ವಾಸ ಮತ ಯಾಚನೆ ಹಿನ್ನಲೆ: ವಿಧಾನ ಸೌಧದ ಸುತ್ತಮುತ್ತಲೂ ನಿಷೇಧಾಜ್ಞೆ ಜಾರಿ

25 May 2018 10:54 AM | Politics
426 Report

ವಿಧಾನಸೌಧದಲ್ಲಿ ಇಂದು ಮೈತ್ರಿ ಸರ್ಕಾರದ ವಿಶ್ವಾಸ ಮತಯಾಚನೆ ಹಿನ್ನಲೆಯಲ್ಲಿ  ವಿಧಾನಸೌಧದ ಸುತ್ತಮುತ್ತಲೂ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಧಾನಸೌಧ ಸುತ್ತಮುತ್ತ ಬಿಗಿ ಪೊಲೀಸ್ ಬಂದೂಬಸ್ತ್ ಅನ್ನು ಏರ್ಪಡಿಸಲಾಗಿದೆ.

ಇಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12ರ ವರೆಗೆ ವಿಧಾನಸೌಧದ ಸುತ್ತಮುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಪ್ರತಿಭಟನೆ, ಧರಣಿ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡಚಣೆ ಉಂಟುಮಾಡುವ ಸಾಧ್ಯತೆ ಇರುವುದರಿಂದ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.ಐದಕ್ಕಿಂತ ಹೆಚ್ಚು ಜನರು ಸೇರುವುದು, ಮೆರವಣಿಗೆ, ಸಭೆ ಸಮಾರಂಭ ನಡೆಸುವುದು, ಮಾರಕಾಸ್ತ್ರ ಹಿಡಿದುಕೊಂಡು ಓಡಾಡುವುದು, ಪಟಾಕಿ ಸಿಡಿಸುವುದು, ಪ್ರತಿಕೃತಿಗಳನ್ನ ಸಿಡಿಸುವುದು, ಮತ್ತೊಬ್ಬರನ್ನು ಪ್ರಚೋದಿಸುವ ಬಹಿರಂಗ ಘೋಷಣೆ ಕೂಗುವುದನ್ನ ನಿಷೇಧ ಮಾಡಲಾಗಿದೆ

 

Edited By

Manjula M

Reported By

Manjula M

Comments