ಅಮಿತ್ ಷಾ ರಹಸ್ಯವನ್ನು ಬಯಲು ಮಾಡಿದ ವಿಧಾನ ಪರಿಷತ್ ಸದಸ್ಯ ಸಿ ಎಂ ಲಿಂಗಪ್ಪ..!

31 May 2018 3:50 PM | Politics
5388 Report

ಗುಜರಾತ್ ಶಾಸಕರಿಗೆ ರಕ್ಷಣೆ ನೀಡಿದ್ದ ಕಾಂಗ್ರೆಸ್ ನಾಯಕನಾದ ಡಿ.ಕೆ. ಶಿವಕುಮಾರ್ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಅವರು ಆಮಿಷ ನೀಡಿದ್ದರು ಎಂಬ ಸ್ಫೋಟಕ ಮಾಹಿತಿವೊಂದನ್ನು ವಿಧಾನ ಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ ಬಹಿರಂಗಪಡಿಸಿದ್ದಾರೆ.

ಗುಜರಾತ್‌ನಲ್ಲಿ ರಾಜ್ಯಸಭೆ ಚುನಾವಣೆ ನಡೆದ ವೇಳೆ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಪಕ್ಷ  ಸೆಳೆದುಕೊಳ್ಳಲು ಪ್ರಯತ್ನ ಪಡುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದವು. ಆ ಸಂದರ್ಭದಲ್ಲಿ  ಕಾಂಗ್ರೆಸ್ ತನ್ನ ಶಾಸಕರನ್ನು ಉಳಿಸಿಕೊಳ್ಳಲು ಕರ್ನಾಟಕಕ್ಕೆ ಕಳುಹಿಸಲಾಗಿತ್ತು. ಆಗ ಡಿ.ಕೆ. ಶಿವಕುಮಾರ್ ಅವರು ಈಗಲ್‌ಟನ್ ರೆಸಾರ್ಟ್‌ನಲ್ಲಿ 42 ಕಾಂಗ್ರೆಸ್‌ ಶಾಸಕರಿಗೆ ಆಶ್ರಯವನ್ನು  ಕಲ್ಪಿಸಿಕೊಟ್ಟಿದ್ದರು.ರಾತ್ರಿ ಸುಮಾರು  11 ಗಂಟೆ ಸುಮಾರಿಗೆ ಡಿ.ಕೆ. ಶಿವಕುಮಾರ್ ಅವರಿಗೆ ಫೋನ್ ಕರೆ ಮಾಡಿದ್ದ ಅಮಿತ್ ಶಾ, ಕಾಂಗ್ರೆಸ್‌ನ ಶಾಸಕರನ್ನು ತಮಗೆ ಒಪ್ಪಿಸುವಂತೆ. ಅದಕ್ಕೆ ಪ್ರತಿಯಾಗಿ ದೊಡ್ಡ ಸಹಾಯವನ್ನು ಮಾಡುವುದಾಗಿ ಆಮಿಷ ಒಡ್ಡಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಲಿಂಗಪ್ಪ ತಿಳಿಸಿದ್ದಾರೆ.

ಅಮಿತ್ ಶಾ ಅವರು ಕರೆ ಮಾಡಿದ್ದ ಸಂದರ್ಭದಲ್ಲಿ ತಾವು ಡಿ.ಕೆ. ಶಿವಕುಮಾರ್ ಅವರ  ಜೊತೆಯಲ್ಲೆ ಇದ್ದಿದ್ದಾಗಿ ಅವರು ತಿಳಿಸಿದ್ದಾರೆ. ಆ ಕಡೆಯಿಂದ ಕರೆ ಮಾಡಿದ ಧ್ವನಿ ಹಿಂದಿಯಲ್ಲಿ ಮಾತನಾಡುತ್ತಿದ್ದರೆ, ಡಿ.ಕೆ. ಶಿವಕುಮಾರ್ ಅವರು ಇಂಗ್ಲಿಷ್‌ನಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದರು ಎಂದು ತಿಳಿಸಿದ್ದಾರೆ. 38 ಶಾಸಕರನ್ನು ನೀವೇ ಇಟ್ಟುಕೊಳ್ಳಿ. ನಾಲ್ವರು ಶಾಸಕರನ್ನು ಮಾತ್ರ ನಮಗೆ ನೀಡಿ. ನಾನು ನಿಮಗೆ ಬಹುದೊಡ್ಡ ಸಹಾಯವನ್ನು ಮಾಡಿ ಕೊಡುತ್ತೇನೆ ಎಂದು ಅಮಿತ್ ಶಾ ಹೇಳಿದ್ದರು. ಆದರೆ, ಅದಕ್ಕೆ ಸಾಧ್ಯವಿಲ್ಲ ಎಂದಿದ್ದ ಶಿವಕುಮಾರ್, ನಾನು ಕಾಂಗ್ರೆಸ್ಸಿಗ. ನನ್ನ ರಕ್ತದಲ್ಲಿಯೂ ಕಾಂಗ್ರೆಸ್ ಇದೆ ಎಂದು ಪ್ರತಿಕ್ರಿಯೆ ನೀಡಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಲಿಂಗಪ್ಪ ತಿಳಿಸಿದ್ದಾರೆ.

 

Edited By

Manjula M

Reported By

Manjula M

Comments