ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿಗೆ ಭರ್ಜರಿ ಜಯ

13 Jun 2018 12:40 PM | Politics
356 Report

ಪ್ರತಿಷ್ಠಿತ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ ಎನ್ ಪ್ರಹ್ಲಾದ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಜಯನಗರ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ತೆಕ್ಕೆಗೆ ಪಡೆದಿದೆ.

ಸೌಮ್ಯಾ ರೆಡ್ಡಿ ಅವರಿಗೆ 54,045 ಮತಗಳು ಲಭಿಸಿದರೆ, ಬಿಜೆಪಿಯ ಬಿ ಎನ್ ಪ್ರಹ್ಲಾದ್ 50,270 ಮತಗಳನ್ನು ಪಡೆದಿದ್ದಾರೆ. ಸೌಮ್ಯಾ ರೆಡ್ಡಿಗೆ 3,775 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಇನ್ನು ಪಕ್ಷೇತರ ಅಭ್ಯರ್ಥಿ ರವಿ ಕೃಷ್ಣಾ ರೆಡ್ಡಿ ಠೇವಣಿ ಕಳೆದುಕೊಂಡಿದ್ದಾರೆ.

Edited By

Shruthi G

Reported By

Shruthi G

Comments