‘ಕೈ’ ಪಕ್ಷದ ಅತೃಪ್ತ ಶಾಸಕರ ಕುರಿತು ಸ್ಪೋಟಕ ಬಾಂಬ್ ಸಿಡಿಸಿದ ಕೆ.ಎಸ್. ಈಶ್ವರಪ್ಪ..!!

13 Jun 2018 4:15 PM | Politics
18140 Report

ನಾವು ಕಾಂಗ್ರೆಸ್ ಮುಕ್ತ ಭಾರತ ಮಾಡಲು ಹೊರಟಿದ್ದರೆ, ಈಗ ಕಾಂಗ್ರೆಸ್ಸಿಗರೇ ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತಿದ್ದಾರೆ. ರಾಜಕೀಯದ ಇತಿಹಾಸದಲ್ಲಿಯೇ ಕಾಂಗ್ರೆಸ್ ಶಾಸಕರು, ಅಧ್ಯಕ್ಷರನ್ನು ಮಾರಾಟ ಮಾಡಲಾಗುತ್ತಿದೆ.

ರಾಜ್ಯದಲ್ಲಿ ಬಿಜೆಪಿ ಬಹುಮತ ಸಾಧಿಸಿತ್ತು. ಬಿ.ಎಸ್. ಯಡಿಯೂರಪ್ಪನವರ ಶಕ್ತಿ ಹಾಗೂ ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಇಂದು ರಾಜ್ಯದ ಜನತೆ ನಲುಗುತ್ತಿದ್ದಾರೆ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವವರು ಕಾಂಗ್ರೆಸ್ ನ ಅತೃಪ್ತರು. ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ‌ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. ಈಗ ಯಾರು ಅಂತ ನಾನು ಹೇಳಲಾರೆ . ನೀವೇ ಮುಂದಿನ ದಿನಗಳಲ್ಲಿ ಕಾದು ನೋಡಿ ಎಂದು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಈಶ್ವರಪ್ಪ ಅವರು ಸಚಿವ ಸ್ಥಾನ ಸಿಕ್ಕದೆ ಅತೃಪ್ತಿಯಿಂದಿರುವ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರಬಹುದು ಎಂದು ಆಹ್ವಾನ ನೀಡಿದ್ದರು. ಬಹುತೇಕ ಶಾಸಕರು ತಮಗೆ ಮಂತ್ರಿ ಗಿರಿ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದಾರೆ. ಆ ಶಾಸಕರು ನಿರಾಶರಾಗುವ ಅಗತ್ಯವಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸಲು ನೆರವಾಗಬೇಕು ಎಂದು ಹೇಳಿಕೆ ನೀಡಿದ್ದರು.

Edited By

Shruthi G

Reported By

Shruthi G

Comments