ಇಂದಿರಾ ಕ್ಯಾಂಟೀನ್ ಬಗ್ಗೆ ಎಚ್’ಡಿಕೆ ಹೇಳಿದ್ದೇನು..!?
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರದ ಆಡಳಿತದಲ್ಲಿ ಮಾಜಿ ಮಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಒಳ್ಳೆಯ ಯೋಜನೆಗಳನ್ನು ಕೈ ಬಿಡಲಾಗುವುದು ಎಂಬ ಗಾಳಿಸುದ್ದಿಗೆ ಮುಖ್ಯಮಂತಿ ಎಚ್ ಡಿ ಕುಮಾರಸ್ವಾಮಿ ತಿರುಗೇಟನ್ನು ನೀಡಿದ್ದಾರೆ..
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಮೈತ್ರಿ ಸರ್ಕಾರದ ಮೊದಲ ಸಮನ್ವಯ ಸಮಿತಿ ಸಭೆಯಲ್ಲಿಯೇ ಹಲವು ರೀತಿಯ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಇದರ ನಡುವೆ ಸಿದ್ದರಾಮಯ್ಯ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಕೂಡ ಮುಂದುವರೆಸಿಕೊಂಡು ಹೋಗಲು ಸಮ್ಮಿಶ್ರ ಸರ್ಕಾರಕ್ಕೆ ಸೂಚನೆಯು ಈಗಾಗಲೇ ಸಿಕ್ಕಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಸಮಯದಲ್ಲಿ ಜಾರಿಗೊಂಡು ಯಶಸ್ಸು ಕಂಡಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ಮುಂದುವರೆಸಲು ನಿರ್ಧರಿಸಲಾಗಿದೆ.




Comments