ಬ್ರೇಕಿಂಗ್ ನ್ಯೂಸ್: ಇವರಿಗೆ ಒಲಿದಿದೆ ಮಂಡ್ಯ ಜಿಲ್ಲಾ ಮಂತ್ರಿ ಸ್ಥಾನ ..!

22 Jun 2018 10:56 AM | Politics
23443 Report

ನೂತನ ಮೈತ್ರಿ ಸರ್ಕಾರ ರಚನೆಯಾದ ದಿನದಿಂದ ಒಂದಲ್ಲ ಒಂದು ರೀತಿಯ ಗೊಂದಲಗಳು ಸೃಷ್ಟಿಯಾಗುತ್ತಲೇ ಇವೆ. ಖಾತೆ ಹಂಚಿಕೆಯ ವಿಷಯದಲ್ಲೂ ಕೂಡ ಇದೇ ಮುಂದುವರೆದಿತ್ತು.  

ಇದೇ ನಿಟ್ಟಿನಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಬಗ್ಗೆಯೂ ಮುಂದಿನ ಎರಡು ಅಥವಾ ಮೂರು ದಿನದೊಳಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಿಳಿಸಿದ್ದರು.ನಗರದಲ್ಲಿ ಗುರುವಾರ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಕುಮಾರಸ್ವಾಮಯವರು  ಮಂಡ್ಯ ಜಿಲ್ಲೆಗೆ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನು ಜಿಲ್ಲಾ ಮಂತ್ರಿ ಮಾಡಲಾಗುವುದು ಎಂದು ಹೇಳಿದರು. ಈ ಬಗ್ಗೆ ಯಾವುದೇ ಅನುಮಾನ ಬೇಡ. ಜನರ ಆಶಯಕ್ಕೆ ತಕ್ಕಂತೆ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Edited By

Manjula M

Reported By

Manjula M

Comments