Big Breaking : ಇವರಿಗೆ ಫಿಕ್ಸ್ ಆಯ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ..!

24 Jun 2018 7:36 PM | Politics
9058 Report

ರಾಜ್ಯ ವಿಧಾನಸಭಾ ಚುನಾವಣೆ ನಡೆದು ಡಾ. ಜಿ. ಪರಮೇಶ್ವರ್ ಅವರು ಕಾಂಗ್ರೆಸ್ ನ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಡಿಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ ನಂತರ ಎರಡೆರಡು ಲಾಭದಾಯಕ ಹುದ್ದೆಯಲ್ಲಿ ಮುಂದುವರೆಯಲು ಅವಕಾಶ ಇಲ್ಲದ ಕಾರಣ, ಅನಿವಾರ್ಯವಾಗಿ ಪರಮೇಶ್ವರ್ ಅವರು ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕಾಗಿದೆ. ಈ ಸ್ಥಾನಕ್ಕೆ ಹಿರಿಯ ನಾಯಕ ಎಚ್.ಕೆ. ಪಾಟೀಲ್ ಅವರನ್ನು ನೇಮಕ ಮಾಡಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.

ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರ ಹೆಸರು ಸಾಕಷ್ಟು ಬಾರಿ ಕೆಪಿಸಿಸಿ ಅಧ್ಯಕ್ಷ ಗಾದಿಗೆ ಹೆಸರು ಕೇಳಿಬಂದಿದ್ದರೂ ಅವರ ಹೆಸರನ್ನು ಹೈಕಮಾಂಡ್ ತೆಗೆದುಹಾಕಿತ್ತು.  ಆದರೆ ಉತ್ತರ ಕರ್ನಾಟಕ ಭಾಗಕ್ಕೆ ಪ್ರಾತಿನಿಧಿತ್ವ ಕೊಡಬೇಕೆಂಬ ಕಾರಣಕ್ಕಾಗಿ ಆ ಭಾಗದ ಹಿರಿಯ ಮುಖಂಡರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಹೈಕಮಾಂಡ್ ತೀರ್ಮಾನಿಸಿದೆ ಎಂಬ ಮಾತು ಕೇಳಿಬರುತ್ತಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಒಂದೆರಡು ಹೆಸರುಗಳು ಕೇಳಿಬಂದಿರಲಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಎಚ್. ಕೆ. ಪಾಟೀಲ್, ಕೆ. ಎಚ್. ಮುನಿಯಪ್ಪ, ಎಂ. ಬಿ. ಪಾಟೀಲ್, ಬಿ.ಕೆ. ಹರಿಪ್ರಸಾದ್ ಅವರುಗಳ ಹೆಸರು ಕೇಳಿಬಂದಿತ್ತು. ಅಲ್ಲದೇ ಸತೀಶ್ ಜಾರಕಿಹೋಳಿ ಮತ್ತು ಟಿ. ಬಿ. ಜಯಚಂದ್ರ ಅವರು ಕೂಡ ಈ ರೇಸ್ ನಲ್ಲಿ ಇದ್ದರು. ರಾಜ್ಯದಲ್ಲಿ ಎಲ್ಲಾ ಭಾಗಗಳಿಗೂ ಸಮಪಾಲಿನ ಅಧಿಕಾರ ಹಂಚಿಕೆ ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್ ನ ನಿಷ್ಟಾವಂತ ಮುಖಂಡ ಎಚ್. ಕೆ. ಪಾಟೀಲ್ ಅವರ ಹೆಸರನ್ನು ಬಹುತೇಕ ಖಚಿತ ಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ತಿಂಗಳ ಅಂತ್ಯದೊಳಗೆ ಅಧಿಕೃತವಾಗಿ ಹೆಸರನ್ನು ಬಹಿರಂಗಗೊಳಿಸಲಾಗುವುದು ಎಂಬ ಮಾಹಿತಿ ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ.

 

 

Edited By

Shruthi G

Reported By

Shruthi G

Comments