ಲೋಕಸಭಾ ಚುನಾವಣೆ ಹಿನ್ನಲೆ ವಿಪಕ್ಷವನ್ನ ಹಣಿಯಲು ಬಿಜೆಪಿಯ ಹೊಸ ಅಸ್ತ್ರ..!ಅಮಿತ್ ಷಾ ಮಾಸ್ಟರ್ ಪ್ಲಾನ್ ಏನ್ ಗೊತ್ತಾ.!?

26 Jun 2018 5:40 PM | Politics
3404 Report

ಲೋಕಸಭಾ ಚುನಾವಣೆಗೆ ಈಗಿನಿಂದಲೇ ಅಗತ್ಯ ತಯಾರಿ ಮಾಡಿಕೊಳ್ಳಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಪಕ್ಷದ ರಾಜ್ಯ ಘಟಕಕ್ಕೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಅಹಮದಾಬಾದ್​ಗೆ ರಾಜ್ಯ ಕಾರ್ಯಕಾರಿಣಿ ಸಭೆಗೆ ಅಮಿತ್ ಷಾ ಅವರನ್ನು ಆಹ್ವಾನ ಮಾಡುವ ಸಲುವಾಗಿ ಹೋಗಿದ್ದ ವೇಳೆಯಲ್ಲಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಯಡಿಯೂರಪ್ಪ ನವರ ಜೊತೆ ಶಾಸಕರಾದ ಬಸವರಾಜ್ ಬೊಮ್ಮಯಿ, ಮುರುಗೇಶ್ ನಿರಾಣಿ, ಉಮೇಶ್ ಕತ್ತಿ ಅವರುಗಳು ಅಹಮದಾಬಾದ್ ಗೆ ತೆರಳಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರಿಗೆ ರಾಜ್ಯರಾಜಕಾರಣದ ಸದ್ಯದ ರಾಜಕೀಯ ಚಿತ್ರಣದ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಸ್ಥಾನವನ್ನು ನಾವು ನಿರೀಕ್ಷಿಸಿದ್ದೇವೆ, ಕಳೆದ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಉತ್ತಮ ಸಾಧನೆ ಬಂದಿದೆ. ಹೀಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ನೋಡಿದರೆ ಬಿಜೆಪಿಗೆ ಈ ಬಾರಿ ಇನ್ನಷ್ಟು ಉತ್ತಮಪಡಿಸಿಕೊಳ್ಳಲು ಅವಕಾಶವಿದೆ. ಆದ್ದರಿಂದ ಈಗಿನಿಂದಲ್ಲೇ ಪಕ್ಷನ್ನು ಇನ್ನಷ್ಟು ಸಂಘಟನೆ ಮಾಡುವ ಪ್ರಯತ್ನ ನಡೆಸಬೇಕಾಗಿದೆ ಎಂದು ಷಾ ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಅಮಿತ್ ಷಾ ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯುವಲ್ಲಿ ಅತುರಪಟ್ಟುಕೊಳ್ಳಬೇಡಿ, ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. ಇಂಥ ಸಂದರ್ಭದಲ್ಲಿ ಆತುರ ಮಾಡಿಕೊಳ್ಳುವುದು ಬೇಡ. ಮೈತ್ರಿ ಸರ್ಕಾರದಲ್ಲಿರುವ ಎರಡು ಪಕ್ಷಗಳು ಕಿತ್ತಾಡಿಕೊಂಡು ತಾವಾಗೀಯೇ ಹೊರಗೆ ಬರುವ ತನಕ ಸುಮ್ಮನೆ ಇರಿ ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಅಲ್ಲದೇ ಪರಿಸ್ಥಿತಿಯ ಲಾಭ ಪಡೆಯುವ ನಿಟ್ಟಿನಲ್ಲಿ ಮುಂದಿನ ನಡೆ ಹೇಗಿರಬೇಕೆಂಬ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಕಾಂಗ್ರೆಸ್ ನ ಕೆಲವು ಶಾಸಕರನ್ನು ಪಕ್ಷದತ್ತ ಸೆಳೆಯಲು ಮತ್ತೇ "ಅಪರೇಷನ್ ಕಮಲ" ನಡೆಸಲು ತೆರೆಮರೆಯಲ್ಲಿ ಕಸರತ್ತು ಆರಂಭಗೊಂಡಿದೆ. ಬಜೆಟ್ ಹಾಗೂ ಕಮಿಷನ್ ವಿಚಾರದಲ್ಲಿ ಹಾಲಿ ಮತ್ತು ಮಾಜಿ ಸಿಎಂ ನಡುವೆ ಪರೋಕ್ಷ ವಾಕ್ಸಮರ ನಡೆಯುತ್ತಿದೆ. ನಮ್ಮ ಸರ್ಕಾರ ಎಷ್ಟು ದಿನ ಇರುತ್ತೆ ಎಂಬುದು ಮುಖ್ಯವಲ್ಲ, ಏನು ಮಾಡಿದ್ದೇವೆ ಎಂಬುದು ಮುಖ್ಯ ಎಂದು ಸಿಎಂ ಕುಮಾರಸ್ವಾಮಿ ಪದೇ, ಪದೇ ನೀಡುತ್ತಿರುವ ಹೇಳಿಕೆಗೆ ಬಿಜೆಪಿ ರಣತಂತ್ರ ರೂಪಿಸುತ್ತಿದೆ ಎಂದು ತಿಳಿದು ಬಂದಿದೆ.

ಬಿಜೆಪಿ ಪಕ್ಷದ ಉನ್ನತ ಮೂಲಗಳ ಪ್ರಕಾರ ಎರಡನೇ ಬಾರಿ ಸರ್ಕಾರ ರಚನೆಗೆ ಅವಕಾಶ ಸಿಕ್ಕರೆ, ಪ್ರಯತ್ನಿಸಲು ಯಡಿಯೂರಪ್ಪ ಮತ್ತು ಬಿಜೆಪಿ ಹೈಕಮಾಂಡ್ ಸಜ್ಜಾಗುತ್ತಿದೆ ಎನ್ನಲಾಗಿದೆ. ಈ ಕಾರಣಕ್ಕಾಗಿಯೇ ಅಮಿತ್ ಷಾ ಬಳಿ ಚರ್ಚಿಸಲು ಯಡಿಯೂರಪ್ಪ ಅಹ್ಮದಾಬಾದಿಗೆ ತೆರಳಿದ್ದಾರೆ ಎಂಬ ಮಾತುಗಳೂ ಕೇಳಿ ಬರುತ್ತಿವೆ. ಒಂದೆಡೆ ಬಿಜೆಪಿ ಹೈಕಮಾಂಡ್ ಮುಂಬರುವ ಲೋಕಸಭಾ ಚುನಾವಣೆಗೆ ರಣತಂತ್ರ ರೂಪಿಸುತ್ತಿದೆ. ಅಮಿತ್ ಷಾ ಮತ್ತು ಯಡಿಯೂರಪ್ಪ ನವರ ಭೇಟಿಯಲ್ಲಿ ಈ ವಿಚಾರಗಳ ಬಗ್ಗೆ ಚರ್ಚಿಸಲಾಗಿದೆ ಎನ್ನಲಾಗಿದೆ. ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ನಡುವಿನ ವೈಷಮ್ಯ ಸಮ್ಮಿಶ್ರ ಸರ್ಕಾರಕ್ಕೆ ಕುತ್ತು ತರುವ ಸಾಧ್ಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕುಮರಸ್ವಾಮಿ ಮಾತು ನೀಡಿದಂತೆ ಸಾಲಮನ್ನಾ ಮಾಡದಿದ್ದರೆ ಅದರ ಸಂಪೂರ್ಣ ಪ್ರಯೋಜನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಿಗಲಿದೆ. ಒಟ್ಟಿನಲ್ಲಿ ಈ ಎಲ್ಲಾ ಲೆಕ್ಕಾಚಾರಗಳನ್ನೂ ಗಮನಿಸಿದರೆ ರಾಜ್ಯ ರಾಜಕೀಯದಲ್ಲಿ ಎರಡನೇ ಬಾರಿ ಗದ್ದುಗೆ ಗುದ್ದಾಟದ ಸಾಧ್ಯತೆಗಳಿವೆ.

Edited By

Shruthi G

Reported By

Shruthi G

Comments