Big Breaking : ಸಿದ್ದು ಗೆ ಬಿಗ್ ಶಾಕ್ ಕೊಟ್ಟ ‘ಕೈ’ ಪಕ್ಷದ ಮುಖ್ಯ ನಾಯಕರು,.!ಶಾಸಕಾಂಗ ಸ್ಥಾನಕ್ಕೆ ಕುತ್ತು..!?

27 Jun 2018 6:10 PM | Politics
8648 Report

ಮೈತ್ರಿ ಸರ್ಕಾರದಲ್ಲಿ ತಲೆನೋವಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ನಲ್ಲಿ ಕೆಲ ಹಿರಿಯ ನಾಯಕರು, ಸಚಿವರುಗಳು ಮುಂದಾಗಿದ್ದಾರೆ ಎನ್ನಲಾಗಿದ್ದು, ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಕೆಳಗೆ ಇಳಿಸುವ ಬಗ್ಗೆ ರಾಹುಲ್ ಗಾಂಧಿಯವರ ಜೊತೆಗೆ ಮಾತನಾಡುವಂತೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ.ಸಿ ವೇಣು ಗೋಪಾಲ್ ಅವರ ಮೇಲೆ ಒತ್ತಡ ಹೇರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶಾಸಕಾಂಗ ಪಕ್ಷದ ನಾಯಕ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಇರುವುದರಿಂದ ಮೈತ್ರಿ ಸರ್ಕಾರದಲ್ಲಿ ಹೊಸ ಬಗೆಯ ತಲೆನೋವು ಶುರುವಾಗಿದ್ದು, ಸಾಲಮನ್ನಾ, ಬಜೆಟ್ ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದಲ್ಲದೇ ಕೆಲವು ಮಂದಿ ಶಾಸಕರು ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರ ಗುಂಪಿನಲ್ಲಿ ಗುರುತಿಸಿಕೊಂಡಿದ್ದು ಮೈತ್ರಿ ಸರ್ಕಾರದ ವಿರುದ್ದ ಅಪಸ್ವರವಾಡುತ್ತಿದ್ದು, ಒಂದು ವೇಳೆ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕ ಸ್ಥಾನ ಕೆಳಗಿಳಿಸಿದರೆ ಇಂತಹ ಸಮಸ್ಯೆಗಳಿಗೆ ಕೊನೆಯಾಗಲಿದೆ ಎನ್ನಲಾಗಿದೆ. ಒಂದು ವೇಳೆ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗೆ ಇಳಿಸಿದರೆ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರನ್ನಾಗಿ ಮಾತ್ರ ಮುಂದುವರೆಯಲಿದ್ದಾರೆ ಎನ್ನಲಾಗಿದೆ. ಇದಲ್ಲದೇ ಶಾಸಕಾಂಗ ಪಕ್ಷದ ನಾಯಕ ಸ್ಥಾನವನ್ನು ಡಿ.ಸಿಎಂ ಡಾ.ಜಿ.ಪರಮೇಶ್ವರ್ ಅವರಿಗೆ ನೀಡಲು ಕೂಡ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಶಾಸಕಾಂಗ ಪಕ್ಷದ ನಾಯಕ ಸ್ಥಾನವನ್ನು ಡಾ.ಜಿ ಪರಮೇಶ್ವರ್ ಅವರಿಗೆ ನೀಡಿದರೆ ಶಾಸಕರು ಪರಮೇಶ್ವರ್ ಅವರಿಗೆ ಸುಲಭವಾಗಿ ಸಿಗುತ್ತಾರೆ ಎನ್ನಲಾಗಿದೆ.

Edited By

Shruthi G

Reported By

Shruthi G

Comments