ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ಕೊಟ್ಟ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್

08 Jul 2018 4:30 PM | Politics
6913 Report

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡಿದ್ದು, ಅದರಲ್ಲಿ ಸರ್ಕಾರಿ ಶಾಳೆಗಳ ವಿಲೀನ ಕುರಿತು ಕೆಲವು ನಿರ್ಧಾರಗಳನ್ನು ಘೊಷಿಸಿದ್ದಾರೆ. ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎನ್.ಮಹೇಶ್ ಅವರು, ಯಾವುದೇ ಸರ್ಕಾರಿ ಶಾಲೆಗಳನ್ನು ವಿಲೀನ ಮಾಡುವುದಿಲ್ಲ. ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಗಳನ್ನು ಕೂಡ ಮುಂದುವರೆಸಲಾಗುವುದು ಎಂದರು. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಗುಣಮಟ್ಟ ಹೆಚ್ಚಳಕ್ಕೆ ಆದ್ಯತೆ ನೀಡಲಾಗುವುದು. ಸರ್ಕಾರದಿಂದಲೇ ಎಲ್‍ಕೆಜಿ ತರಗತಿ ಒಳಗೊಂಡ ಶಾಲೆಗಳನ್ನು ತೆರೆಯುವ ಚಿಂತನೆಯಿದೆ. ಹಾಗೇಯೇ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಕಲಿಸುವ ಯೋಜನೆಯೂ ಇದೆ. ಆ ಮೂಲಕ ಸರ್ಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟದಲ್ಲಿ ಬದಲಾವಣೆ ತರುಬಹುದಾಗಿದೆ ಎಂದು ಮಹೇಶ್ ಹೇಳಿದರು.

Edited By

Shruthi G

Reported By

Shruthi G

Comments