ಉತ್ತರ ಕರ್ನಾಟಕದ ಜನತೆಗೆ ಸಿಎಂ ಎಚ್’ಡಿಕೆ ತೆಗೆದುಕೊಂಡ ಮಹತ್ವದ ನಿರ್ಧಾರ ಏನ್ ಗೊತ್ತಾ?

01 Aug 2018 10:19 AM | Politics
3495 Report

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆ ಕುರಿತಂತೆ ತಾವು ಆಡಿದ ಮಾತುಗಳ ಬಳಿಕ ಉಂಟಾದ ಆಕ್ರೋಶ ಶಮನಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ಉತ್ತರ ಕರ್ನಾಟಕ ಭಾಗದ ಸಂಘಟನೆಯ ಮುಖಂಡರ ಜೊತೆ ಮಾತುಕತೆ ನಡೆಸಿದ್ದಾರೆ.

ತಾವು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿಯನ್ನು ಎರಡನೇ ರಾಜಧಾನಿ ಮಾಡುವ ಕುರಿತು ಹೇಳಿದ ಮಾತಿಗೆ ಬದ್ಧವಾಗಿರುವುದಾಗಿ ತಿಳಿಸಿರುವ ಕುಮಾರಸ್ವಾಮಿಯವರು, ಪ್ರಮುಖ ಸರ್ಕಾರಿ ಕಚೇರಿಗಳನ್ನು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಲು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಸುವರ್ಣಸೌಧದಲ್ಲಿ ಉಪಲೋಕಾಯುಕ್ತರ ಕಚೇರಿ ಆರಂಭಿಸುವುದು, ಬೆಳಗಾವಿ-ಕಲಬುರ್ಗಿಗೆ ಒಬ್ಬರಂತೆ ಇಬ್ಬರು ಮಾಹಿತಿ ಹಕ್ಕು ಆಯುಕ್ತರನ್ನು ವರ್ಗಾಯಿಸುವುದು ಹಾಗೂ ಕರ್ನಾಟಕ ನೀರಾವರಿ ನಿಗಮ, ಕೃಷ್ಣ ಭಾಗ್ಯ ಜಲ ನಿಗಮ ಸೇರಿದಂತೆ ಉತ್ತರ ಕರ್ನಾಟಕ ಭಾಗಕ್ಕೆ ಸಂಬಂಧಪಟ್ಟ ಎಲ್ಲ ಕಚೇರಿಗಳನ್ನು ಸ್ಥಳಾಂತರಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 20 ದಿನದೊಳಗಾಗಿ ಬೆಳಗಾವಿಯಲ್ಲಿ ಆ ಭಾಗದ ಪ್ರತಿನಿಧಿಗಳ ಜತೆ ಸಭೆ ನಡೆಸಿ ಉತ್ತರ ಕರ್ನಾಟಕದ ಸಮಗ್ರ ಅಭಿ ವೃದ್ಧಿಗೆ ಸರ್ಕಾರ ಕೈಗೊಳ್ಳಲಿರುವ ಕಾರ್ಯ ಕ್ರಮಗಳನ್ನು ಘೋಷಣೆ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

Edited By

Shruthi G

Reported By

Shruthi G

Comments