ಮಾಜಿ ಸಂಸದೆ ರಮ್ಯಾಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್ ಹೈಕಮಾಂಡ್..!

ಮಾಜಿ ಸಂಸದೆ ರಮ್ಯಾ ಅವರ ಹೆಸರು ಇತ್ತಿಚಿಗೆ ಸ್ವಲ್ಪ ಹೆಚ್ಚಾಗಿಯೇ ಕೇಳಿ ಬರುತ್ತಿದೆ. ಇದೀಗ ಮಾಜಿ ಸಂಸದೆ ರಮ್ಯಗೆ ಕಾಂಗ್ರೆಸ್ ಬಿಗ್ ಶಾಕ್ ಒಂದನ್ನು ನೀಡಿದೆ.
ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆಯಾಗಿರುವಂತಹ ಮಾಜಿ ಸಂಸದೆಯಾದ ರಮ್ಯಾಗೆ ಕಾಂಗ್ರೆಸ್ ಬಿಗ್ ಶಾಕ್ ನೀಡಿದೆ ಹಾಗೂ ಅನಗತ್ಯವಾಗಿ ಟ್ವೀಟ್ ಮಾಡವುದಕ್ಕೆ ನಿರ್ಬಂಧವನ್ನು ಹೇರಲಾಗಿದೆ ಎಂದು ಹೇಳಲಾಗುತ್ತಿದೆ. ಎಐಸಿಸಿ ಮುಖ್ಯಸ್ಥರಾದ ರಾಹುಲ್ ಗಾಂಧಿಯ ಟ್ವೀಟ್ ಹಾಗೂ ಸಾರ್ವಜನಿಕ ಭಾಷಣಗಳ ಉಸ್ತುವಾರಿಯಿಂದ ರಮ್ಯಾಗೆ ಕೊಕ್ ನೀಡಿ ಆ ಜಾಗಕ್ಕೆ ಕೇಂದ್ರ ಸಚಿವೆಯಾದ ಮಾರ್ಗರೇಟ್ ಆಳ್ವಾ ಪುತ್ರ ನಿಖೀಲ್ ಆಳ್ವಾಗೆ ವಹಿಸಲಾಗಿದೆ ಎನ್ನಲಾಗಿದೆ.
Comments