ಸಿಎಂ ಎಚ್’ಡಿಕೆಯ ಜನತಾ ದರ್ಶನದ ಸಮಯ ಬದಲು: ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್

28 Aug 2018 1:08 PM | Politics
3873 Report

ಕುಮಾರಸ್ವಾಮಿಯವರು ಮೊದಲೆ ಹೇಳಿದಂತೆ ಜನತಾ ದರ್ಶನಾವನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಹೆಚ್​. ಡಿ ಕುಮಾರಸ್ವಾಮಿಯವರನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ತಿಳಿಸಿ ಪರಿಹಾರ ಕಂಡುಕೊಳ್ಳಲು ಸಾವಿರಾರು ಜನ ಬರುತ್ತಾರೆ. ಇದರಿಂದ ಮುಖ್ಯಮಂತ್ರಿಗಳ ಅಧಿಕೃತ ಕಾರ್ಯಕ್ರಮಗಳಿಗೆ ತೊಂದರೆಯಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಇದೀಗ ತಾವು ಬೆಂಗಳೂರಿನಲ್ಲಿರುವ ಸಂದರ್ಭದಲ್ಲಿ ಪ್ರತಿ ಶನಿವಾರ ಸಾರ್ವಜನಿಕರನ್ನು ಭೇಟಿಯಾಗಲು ಸಿಎಂ ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಈ ವಿಷಯವಾಗಿ ಮುಖ್ಯಮಂತ್ರಿಗಳ ಕಚೇರಿಯು ಅಧಿಕೃತವಾಗಿ  ಪ್ರಕಟನೆಯನ್ನು ಹೊರಡಿಸಿದೆ. ಪ್ರಕಟಣೆಯಲ್ಲಿ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿರುವ ಸಂದರ್ಭದಲ್ಲಿ ಪ್ರತಿ ಶನಿವಾರದಂದು ಬೆಳಗ್ಗೆ 11 ರಿಂದ ಸಂಜೆ 4.30ರವರೆಗೆ ಕುಮಾರಕೃಪಾ ರಸ್ತೆಯಲ್ಲಿರುವ ಗೃಹ ಕಚೇರಿ ಕೃಷ್ಣಾದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿಸಲಾಗಿದೆ.

Edited By

Manjula M

Reported By

Manjula M

Comments