ಸ್ಥಳೀಯ ಸಂಸ್ಥೆ ಚುನಾಯಿತ ಸದಸ್ಯರಿಗೆ ಎಚ್ ಡಿ ಕೆ ಯಿಂದ ಈ ಸಂದೇಶ!

03 Sep 2018 5:33 PM | Politics
3846 Report

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಚುನಾಯಿತರಾಗಿರುವ ಜನಪ್ರತಿನಿಧಿಗಳಿಗೆ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಶುಭಾಶಯ ಹೇಳಿದ್ದಾರೆ.

ಟ್ವಿಟರ್​ ಮೂಲಕ ಶುಭಾಶಯ ತಿಳಿಸಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಯವರು ಸ್ಥಳೀಯಸಂಸ್ಥೆಗಳ ಚುನಾವಣೆಯಲ್ಲಿ ಚುನಾಯಿತರಾಗಿರುವ ನೂತನ ಜನಪ್ರತಿನಿಧಿಗಳಿಗೆ ಅಭಿನಂದನೆಗಳು. ಸರ್ಕಾರದ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಇದನ್ನು ನಾವು ಸಮರ್ಥವಾಗಿ ನಿಭಾಯಿಸಬೇಕಿದೆ. ನಾಡಿನ ಅಭಿವೃದ್ಧಿಗಾಗಿ ಎಲ್ಲರೂ ಒಟ್ಟಾಗಿ ದುಡಿಯೋಣ ಅಂತ ಟ್ವಿಟ್ ಮಾಡಿದ್ದಾರೆ.

Edited By

venki swamy

Reported By

venki swamy

Comments

Cancel
Done