ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಬಿಜೆಪಿ: 24 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫೈನಲ್ !?

26 Sep 2018 11:15 AM | Politics
5415 Report

ಮುಂಬರುವ ಲೋಕಸಭಾ ಚುನಾವಣೆಗೆ  ಎಲ್ಲಾ ಪಕ್ಷದವರು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. 2019 ರ ಲೋಕಸಭಾ ಚುನಾವಣೆಗೆ ಬಿಜೆಪಿ ಪಕ್ಷ ಕೂಡ ಭರದ ಸಿದ್ದತೆಯನ್ನು ಮಾಡಿಕೊಳ್ಳುತ್ತಿದ್ದು, ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ, ಈಗಾಗಲೇ 24ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಫೈನಲ್ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷರಾದ  ಬಿ.ಎಸ್ .ಯಡಿಯೂರಪ್ಪ ಅವರು ಅಕ್ಟೋಬರ್ 2 ರಿಂದ ರಾಜ್ಯ ಪ್ರವಾಸ ಮಾಡುವ ಸಾಧ್ಯತೆ ಎನ್ನಲಾಗಿದೆ. ಈಗಾಗಲೇ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರದ ಪೈಕಿ 104 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಲೋಕಸಭಾ ಚುನಾವಣೆಯಲ್ಲೂ ಗೆಲುವು ಸಾಧಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಅಕ್ಟೋಬರ್ 2 ರ ಗಾಂಧಿ ಜಯಂತಿ ಬಳಿಕ ರಾಜ್ಯದ 30 ಜಿಲ್ಲೆಗಳಲ್ಲೂ ಪ್ರವಾಸ ಮಾಡಲು ಯಡಿಯೂರಪ್ಪ ಯೋಜನೆ ರೂಪಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Edited By

Manjula M

Reported By

Manjula M

Comments