ಲೋಕೋಪಯೋಗಿ ಅಧಿಕಾರಿಗಳಿಗೆ ಬಿಗ್ ಶಾಕ್ ಕೊಟ್ಟ ಹೆಚ್.ಡಿ ರೇವಣ್ಣ

01 Oct 2018 10:59 AM | Politics
266 Report

ರಾಜಕೀಯ ವಲಯದಲ್ಲಿ ಹೆಚ್ ಡಿ ರೇವಣ್ಣ ಅವರು ಪದೇ ಪದೇ ಸುದ್ದಿಯಾಗುತ್ತಿದ್ದಾರೆ. ಆದರೆ ಇದೀಗ ಲೋಕೋಪಯೋಗಿ ಅಧಿಕಾರಿಗಳಿಗೆ ಹಾಗೂ ನೌಕರರಿಗೆ ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಬಿಗ್ ಶಾಕ್ ನೀಡಿದ್ದಾರೆ.  ರಾತ್ರೋರಾತ್ರಿ 700 ಅಧಿಕಾರಿಗಳನ್ನುಮತ್ತು ನೌಕರರನ್ನು ಯಾವುದೇ ಸೂಚನೆ ನೀಡದೆ ವರ್ಗಾವಣೆ ಮಾಡಿದ್ದಾರೆ.  

ಎಂಜಿನಿಯರ್ ಅಧಿಕಾರಿಗಳಿಂದ ಹಿಡಿದು, ಪ್ರಥಮ ದರ್ಜೆ ಸಹಾಯಕವರೆಗಿನ ನೌಕರರನ್ನು ವರ್ಗಾವಣೆ ಮಾಡಲಾಗಿದೆ. ನೌಕರರನ್ನು ವರ್ಗಾವಣೆಗೊಳಿಸಿ ಶನಿವಾರ ಮಧ್ಯರಾತ್ರಿ ಆದೇಶ ಹೊರಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರೇವಣ್ಣ ತಾವು ಸಚಿವರಾದ ನಂತರ ಲೋಕೋಪಯೋಗಿ ಇಲಾಖೆಯಲ್ಲಿ 270 ಕ್ಕೂ ಹೆಚ್ಚು ವರ್ಗಾವಣೆಯನ್ನು ಇತ್ತೀಚಿಗೆ ಮಾಡಲಾಗಿತ್ತು. ಲೋಕೋಪಯೋಗಿ ಇಲಾಖೆ ಒಂದರಲ್ಲೇ ವರ್ಗಾವಣೆ ಸಂಬಂಧ ಸುಮಾರು 500 ಕ್ಕೂ ಹೆಚ್ಚು ಶಿಫಾರಸ್ಸು ಪತ್ರಗಳು ಬಂದಿದ್ದವು ಎಂಬ ಮಾಅಹಿತಿ ಲಭ್ಯವಾಗಿದೆ.

Edited By

Manjula M

Reported By

Manjula M

Comments