ಉಪಚುನಾವಣೆಯ ಬಗ್ಗೆ ಸ್ಪಷ್ಟನೆ ನೀಡಿದ ಪ್ರಜ್ವಲ್ ರೇವಣ್ಣ..!

15 Oct 2018 4:22 PM | Politics
352 Report

ಜೆಡಿಎಸ್ ನಿಂದ ರಾಮನಗರ ವಿಧಾನಸಭಾ ಚುನಾವಣೆಯಲ್ಲಿ ಅನಿತಾಕುಮಾರಸ್ವಾಮಿಯವರು ಸ್ಪರ್ಧೆ ಮಾಡುತ್ತಿದ್ದಾರೆ ಎಂಬುದು ಖಚಿತವಾಗಿದೆ. ಈ ನಡುವೆ ಮತ್ತೊಮ್ಮೆ ರಾಜ್ಯದ ಜನತೆ ಜೆಡಿಎಸ್ ಪಕ್ಷನ್ನು ಕುಟುಂಬ ರಾಜಕಾರಣದ ಪಕ್ಷ ಅಂತ ಹೇಳುವಂತಾಗಿದೆ.

ಅನಿತಾ ಕುಮಾರ ಸ್ವಾಮಿ ಸ್ಪರ್ಧೆ ವಿಚಾರವಾಗಿ ಹಾಸನದಲ್ಲಿ ಮಾತನಾಡಿರುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಅನಿತಾ ಕುಮಾರ ಸ್ವಾಮಿ ಸ್ಪರ್ಧೆ ವಿಚಾರವಾಗಿ ನಮ್ಮ ಕುಟುಂಬದಲ್ಲಿ ಯಾವುದೇ ಗೊಂದಲವಿಲ್ಲ, ಯಾವುದೇ ಅಸಮಾಧಾನ ಕೂಡ ಇಲ್ಲ ಅಂತ ಹೇಳಿದರು.  ನಾನು ಯಾವುದೆ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಸ್ಪಷ್ಟ ಪಡಿಸಿದರು.

Edited By

Manjula M

Reported By

Manjula M

Comments