ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮಹೂರ್ತ ಫಿಕ್ಸ್..! ಯಾವಾಗ ಗೊತ್ತಾ..?

05 Nov 2018 2:39 PM | Politics
1127 Report

ಬಹಳ ದಿನದಿಂದ ಎಳೆದಾಡುತ್ತಿರುವ  ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಅಂತೂ ಇಂತೂ ಮಹೂರ್ತ ಕೂಡಿ ಬಂದಂತಿದೆ. ನವೆಂಬರ್ 3 ರಂದು ನಡೆದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ನವೆಂಬರ್ 6 ರಂದು ಹೊರ ಬೀಳಲಿದ್ದು, ಬಳಿಕ ಸಂಪುಟ ವಿಸ್ತರಣೆ ಆಗುವ ಸಾಧ್ಯತೆಯಿದೆ ಎಂದಿದ್ದಾರೆ.. ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಕೂಡ ಭಾನುವಾರದಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಈ ವಿಚಾರ ಸ್ಪಷ್ಟಪಡಿಸಿದ್ದಾರೆ.

ಉಪ ಚುನಾವಣೆ ಫಲಿತಾಂಶದ ಬಳಿಕ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗಳ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಇದರಿಂದಾಗಿ ಸಚಿವ ಸ್ಥಾನಾಕಾಂಕ್ಷಿ ಶಾಸಕರ ಚಟುವಟಿಕೆಗಳು ಗರಿಗೆದರಿದ್ದು, ತಮ್ಮ ತಮ್ಮ ನಾಯಕರನ್ನು ಹಿಡಿದುಕೊಂಡು ಪಕ್ಷದ ವರಿಷ್ಠರ ಮೇಲೆ ಪ್ರಭಾವ ಬೀರಲು ಮುಂದಾಗಿದ್ದಾರೆ. ಸಚಿವ ಮಹೇಶ್ ಅವರಿಂದ ತೆರವಾಗಿರುವ ಸ್ಥಾನಕ್ಕೆ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿಯವರ ಹೆಸರು ಕೇಳಿ ಬರುತ್ತಿದ್ದು, ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಇದು ಸ್ಪಷ್ಟಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Edited By

Manjula M

Reported By

Manjula M

Comments