ರಾಮನಗರ ವಿಧಾನಸಭಾ ಉಪಚುಣಾವಣೆ : ಅನಿತಾ ಕುಮಾರಸ್ವಾಮಿಗೆ ಭರ್ಜರಿ ಮುನ್ನಡೆ

06 Nov 2018 9:40 AM | Politics
451 Report

ಮೊನ್ನೆ ಮೊನ್ನೆಯಷ್ಟೆ ರಾಜ್ಯದ ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆಯು ನಡೆದಿತ್ತು. ಅಂದು ನಡೆದ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಈಗಾಗಲೇ ಮತ ಎಣಿಕೆ ಕಾರ್ಯ ಪ್ರಾರಂಭಗೊಂಡಿದೆ. ಮಧ್ಯಾಹ್ನದೊಳಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.  

ರಾಮನಗರ ವಿಧಾನಸಭಾ ಉಪಚುನಾವಣೆಯ 6 ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರು ಬಾರಿ ಮುನ್ನಡೆ ಸಾಧಿಸಿದ್ದಾರೆ. 6 ನೇ ಸುತ್ತಿನ ಮತಎಣಿಕೆ ಮುಕ್ತಾಯಕ್ಕೆ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರು 37 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

Edited By

Manjula M

Reported By

Manjula M

Comments