ಶಿವಮೊಗ್ಗ ಲೋಕಸಭಾ ಉಪಚುನಾವಣೆ ಹಿನ್ನಲೆ: ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮುನ್ನಡೆ

06 Nov 2018 11:53 AM | Politics
571 Report

ಈಗಾಗಲೇ  ರಾಜ್ಯದ ಮೂರು  ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಿಗೆ  ಉಪ ಚುನಾವಣೆ ನಡೆದಿದ್ದು ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಈಗಾಗಲೇ ಮತ ಎಣಿಕೆ ಕಾರ್ಯ ಮುಕ್ತಾಯದ ಹಂತ ತಲುಪಿದೆ ಎಂದು ಹೇಳಲಾಗುತ್ತಿದೆ.

ಶಿವಮೊಗ್ಗ ಲೋಕಸಭಾ ಉಪಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು 41359 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಿ.ವೈ. ರಾಘವೇಂದ್ರ ಅವರು 361751 ಮತಗಳನ್ನು ಪಡೆದರೆ, ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ 321930 ಮತಗಳನ್ನು ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

Edited By

Manjula M

Reported By

Manjula M

Comments