ಹೆಚ್.ಡಿ. ದೇವೇಗೌಡರನ್ನು ಭೇಟಿ ಮಾಡಿದ ಜಮೀರ್ ಅಹ್ಮದ್..!!

09 Nov 2018 12:19 PM | Politics
1401 Report

ಟಿಪ್ಪು ಜಯಂತಿ ಆಚರಣೆಯನ್ನು ವಿಧಾನಸೌಧದ ಬ್ಯಾಕ್ವೆಂಟ್ ಹಾಲ್ ನಲ್ಲಿಯೇ ನವೆಂಬರ್ 10 ಮಾಡಲಾಗುವುದು ಎಂದು  ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಮಾಜಿ ಪ್ರಧಾನಿಯಾದ ಹೆಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಟಿಪ್ಪು ಜಯಂತಿಯನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಕಾರ್ಯಕ್ರಮದಲ್ಲಿ ಯಾವುದೇ ಗಲಾಟೆ ಗೊಂದಲ ಉಂಟಾಗ ಬಾರದೆಂದು ಭಾಗವಹಿಸುವವರ ಸಂಖ್ಯೆಯನ್ನು ಸೀಮಿತಗೊಳಿಸಲಾಗಿದೆ ಎಂದು ಜಮೀರ್ ಅಹಮದ್ ತಿಳಿಸಿದ್ದಾರೆ,

ಎರಡು ಸಾವಿರ ಟಿಕೆಟ್’ಗಳನ್ನು ಮಾತ್ರ ಮುದ್ರಿಸುತ್ತಿದ್ದು, ಟಿಕೆಟ್ ಇದ್ದವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಬಿಜೆಪಿ ಅವರು ಟಿಪ್ಪು ಜಯಂತಿ ವಿಚಾರದಲ್ಲಿ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರೇ ಹಿಂದೆ ಟಿಪ್ಪು ಜಯಂತಿ ಆಚರಣೆಯನ್ನು ಮಾಡಿದ್ದರು. ಆದರೆ ಈಗ ರಾಜಕೀಯಕ್ಕಾಗಿ ವಿರೋಧ ಮಾಡುತ್ತಿದ್ದಾರೆ. ಅದಕ್ಕೆ ನಾವು ಯಾರು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ತಿಳಿಸಿದರು

Edited By

Manjula M

Reported By

Manjula M

Comments