ಸಚಿವ ಸಂಪುಟ ವಿಸ್ತರಣೆ ದಿನಾಂಕ..!! ಸಮನ್ವಯ ಸಮಿತಿ ನಿರ್ಧಾರವಾಗುತ್ತಾ ಇಂದು..!?

05 Dec 2018 9:31 AM | Politics
218 Report

ಇಂದು ದೋಸ್ತಿ ಸರ್ಕಾರದಿಂದ ಸಮನ್ವಯ ಸಮಿತಿಯು ಸಭೆಯು ನಡೆಯುತ್ತಿದೆ.. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದ್ದು, ಸಂಪುಟ ವಿಸ್ತರಣೆಯ ಯಾವಾಗ ಎನ್ನುವ ಪ್ರಶ್ನೆಗೆ ಉತ್ತರ ಸಿಗುವ ನಿರೀಕ್ಷೆಯಿದೆ. ಸಂಪುಟದಲ್ಲಿ ಖಾಲಿ ಇರುವ ಎಂಟು ಸ್ಥಾನಗಳಿಗೆ ಆಕಾಂಕ್ಷಿ ಶಾಸಕರ ದೊಡ್ಡ ಪಟ್ಟಿಯೇ ಇದೆ..

ಇಂದು ಸಂಜೆ 5 ಗಂಟೆಗೆ ನಡೆಯುವ ಸಮನ್ವಯ ಸಮಿತಿ ಸಭೆಗೆ ಮುನ್ನ ಕಾಂಗ್ರೆಸ್ ಪಕ್ಷದ ನಾಯಕರು ಪೂರ್ವಭಾವಿ ನಡೆಸಲಿದ್ದು, ಸಂಪುಟ ವಿಸ್ತರಣೆ ಬಗ್ಗೆ ಆ ಸಂದರ್ಭದಲ್ಲಿಯೇ ನಿರ್ಧರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.. ಕಾಂಗ್ರೆಸ್ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿಸಿಎಂ ಡಾ.ಜಿ. ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಜನ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Edited By

Manjula M

Reported By

Manjula M

Comments