ದೋಸ್ತಿ ಸರ್ಕಾರದ ಸಚಿವಸ್ಥಾನ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ..!!

06 Dec 2018 10:54 AM | Politics
143 Report

ಸಮ್ಮಿಶ್ರ ಸರ್ಕಾರದ ಸಚಿವಸ್ಥಾನ ಆಕಾಂಕ್ಷಿಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಡಿಸೆಂಬರ್ 22 ಕ್ಕೆ ದೋಸ್ತಿ ಸರಕಾರದ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾಂಗ್ರೆಸ್ ಜೆಡಿಎಸ್ ದೋಸ್ತಿ ಸರ್ಕಾರದ ಸಮನ್ವಯ ಸಮಿತಿ ಸಭೆ ಮುಗಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.

ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಮಾತನಾಡಬೇಕಿದೆ. ಡಿಸೆಂಬರ್ 22 ಕ್ಕೆ ಸಂಪುಟ ವಿಸ್ತರಣೆ ಮಾಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು. ಡಿಸೆಂಬರ್22 ರಂದು ನಿಗಮ ಮಂಡಳಿ ನೇಮಕವೂ ಆಗಲಿದೆ. ಜೆಡಿಎಸ್ ನಿಂದ 10 ಕಾಂಗ್ರೆಸ್ ನಿಂದ 20 ಶಾಸಕರನ್ನು ಬೋರ್ಡ್ ಗೆ ನೇಮಕ ಮಾಡಲಾಗುವುದು ಈ ಕುರಿತು ಸಮನ್ವಯ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Edited By

Manjula M

Reported By

Manjula M

Comments