ಉತ್ತರ ಕರ್ನಾಟಕ್ಕಾಗಿ ಐತಿಹಾಸಿಕ ನಿರ್ಧಾರ ಕೈಗೊಂಡ ಎಚ್ ಡಿ ಕುಮಾರಸ್ವಾಮಿ..!!

08 Dec 2018 1:55 PM | Politics
2859 Report

ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದ ನಂತರ ಉತ್ತರ ಕರ್ನಾಟಕ ಭಾಗವನ್ನು ಕಡೆಗಣಿಸಲಾಗಿದೆ ಎಂದು ಆ ಭಾಗದ ಜನಪ್ರತಿನಿಧಿಗಳು ಆರೋಪಿಸಿದ್ದರು, ಆದರೆ ಈಗ ರಾಜ್ಯ ಸರ್ಕಾರ ಬೆಳಗಾವಿಯನ್ನು ಕರ್ನಾಟಕದ ಎರಡನೆ ರಾಜಧಾನಿ ಎಂದು ಘೋಷಿಸಲು ಚಿಂತನೆ ನಡೆಸಿದೆ.

ಗಡಿ ವಿವಾದವನ್ನು ಮುಂದಿಟ್ಟುಕೊಂಡು ಕರ್ನಾಟಕದ ವಿರುದ್ಧ ಸದಾ ಕತ್ತಿ ಮಸೆಯುವ ಎಂಇಎಸ್ ಮತ್ತು ಮಹಾರಾಷ್ಟ್ರದ ಆಟಾಟೋಪಕ್ಕೆ ಕಡಿವಾಣ ಹಾಕಲು ಮುಂದಾಗಿದ್ದು, ರಾಜ್ಯ ಸರ್ಕಾರ ತನಗಿರುವ ವಿಶೇಷ ಅಧಿಕಾರವನ್ನು ಬಳಸಿಕೊಂಡು ಎರಡನೆ ರಾಜಧಾನಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವ ಸಲುವಾಗಿ ರಾಜ್ಯ ಸರ್ಕಾರ ಬೆಳಗಾವಿಯನ್ನು ಎರಡನೇ ರಾಜಧಾನಿಯಾಗಿ ಘೋಷಿಸಿ, ಲೋಕೋಪಯೋಗಿ, ಜಲಸಂಪನ್ಮೂಲ, ಕೈಗಾರಿಕಾ ಇಲಾಖೆಗಳನ್ನು ಮೊದಲ ಹಂತದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಸ್ಥಳಾಂತರಿಸಿ ಆಡಳಿತದ ವಿಕೇಂದ್ರಿಕರಣ ಮಾಡಬೇಕು ಎನ್ನುವ ಉದ್ದೇಶದಿಂದ ಸಿಎಂ ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಸಿಎಂ ಹೆಚ್.ಡಿಕೆ ಐತಿಹಾಸಿಕ ನಿರ್ಧಾರ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ.

Edited By

venki swamy

Reported By

venki swamy

Comments