ದೋಸ್ತಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಡಿ.22 ಡೌಟ್..!! ಮತ್ತೆ ಯಾವಾಗ..?

20 Dec 2018 10:03 AM | Politics
463 Report

ಡಿಸೆಂಬರ್ 22 ಕ್ಕೆ ದೋಸ್ತಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗುವುದು ಡೌಟ್  ಎನ್ನಲಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸುವರ್ಣ ಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಡಿ. 22 ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬ ಭರವಸೆವನ್ನು ನೀಡಲಾಗಿತ್ತು, ಆದರೆ ಕಾಂಗ್ರೆಸ್ ಶಾಸಕರಿಗೆ ಡಿ.22 ರಂದು ಸಚಿವ ಸಂಪುಟ ವಿಸ್ತರಣೆಗೆ ಅನುಮಾನ ಎನ್ನಲಾಗುತ್ತಿದೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢ ಸಂಪುಟ ರಚನೆಯ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ.  ಕರ್ನಾಟಕದತ್ತ ಗಮನ ಹರಿಸುವ ಸಾಧ್ಯತೆ ಇಲ್ಲ ಎಂದು ಶಾಸಕರೊಬ್ಬರು ತಿಳಿಸಿದ್ದದಾರೆ. ಆದರೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಸಮ್ಮತಿ ನಿರೀಕ್ಷಿಸಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿಸಿಎಂ ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ.

Edited By

Manjula M

Reported By

Manjula M

Comments