ಬಿಜೆಪಿ ಮುಖಂಡರಿಗೆ ಬಹಿರಂಗ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್..!

05 Jan 2019 5:27 PM | Politics
1850 Report

ಮುಂಬರುವ ಲೋಕಸಭೆ ಚುನಾವಣೆಗೆ ಈಗಾಗಲೆ   ಭರ್ಜರಿ ಸಿದ್ಧತೆಯನ್ನು  ನಡೆಸಿರುವ ಕಾಂಗ್ರೆಸ್ ಇದೀಗ ಪಕ್ಷದ ಬಲವರ್ಧನೆಗೆ ಹೆಚ್ಚು ಒತ್ತನ್ನು ನೀಡುತ್ತಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಭದ್ರಕೋಟೆಯಾಗಿರುವ ರಾಮನಗರದಲ್ಲಿ ಇದೀಗ ಸಚಿವ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಸೇರಬಯಸುವ ನಾಯಕರಿಗೆ ಪಕ್ಷ ಸೇರ್ಪಡೆಗೆ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.. ಈವಿಷಯವಾಗಿ ಚನ್ನಪಟ್ಟಣದಲ್ಲಿ  ಸುದ್ದಿಗೋಷ್ಠಿ ನಡೆಸಿರುವ ಕಾಂಗ್ರೆಸ್ ಮುಖಂಡರು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೆ ಇಚ್ಚೆ ಹೊಂದಿರುವ ಬಿಜೆಪಿ ನಾಯಕರಿಗೆ ನಮ್ಮ ಪಕ್ಷದ ಬಾಗಿಲು ಸದಾ ತೆಗೆದಿರುತ್ತದೆ ಎಂದು ಆಹ್ವಾನವನ್ನು ನೀಡಿದ್ದಾರೆ.

ಬಿಜೆಪಿ ಪಕ್ಷದಿಂದ ಯಾರು ಬೇಕಾದರೂ ಕಾಂಗ್ರೆಸ್ ಗೆ ಸೇರಬಹುದು. ಈ ಬಗ್ಗೆ ಸ್ವತಃ ಡಿ.ಕೆ.ಶಿವಕುಮಾರ್ ಅವರೇ ಆಹ್ವಾನವನ್ನು ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಈಗಾಗಲೇ ಚನ್ನಪಟ್ಟಣದ ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಸೇರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದು, ಸಚಿವರು, ಭೇಟಿಯಾಗಿ ಮಾತುಕತೆಯನ್ನು ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶಿಷ್ಠ ಆಹ್ವಾನವನ್ನು ನೀಡಲಾಗಿದೆ. ಈ ಕುರಿತು ಮುಂದಿನ ದಿನಗಳಲ್ಲಿ ಪೂರ್ಣ ವಿವರ ಬಹಿರಂಗಪಡಿಸಲಾಗುವುದು ಎಂದು ತಿಳಿಸಿದರು.. ಈ ನಿಟ್ಟಿನಲ್ಲಿ ರಾಜಕೀಯವನ್ನು ದೊಂಬರಾಟ ಎನ್ನುವುದು.. ಪಕ್ಷದಿಂದ ಪಕ್ಷಕ್ಕೆ ಹಾರುವ ಕೆಲಸವನ್ನು ರಾಜಕೀಯದವರು ಮಾಡುತ್ತಾರೆ.

Edited By

Manjula M

Reported By

Manjula M

Comments